ಶ್ರೀ ಮಹಾವೀರ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನ ಆಚರಣೆ

ಶ್ರೀ ಮಹಾವೀರ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನ ಆಚರಣೆ


ಮೂಡುಬಿದಿರೆ: ನಾಗರೀಕ ಹಕ್ಕಿನ ಪರಿಕಲ್ಪನೆ ಎಂದರೆ ಎಲ್ಲರೂ ಸಮಾನವಾಗಿ ಬದುಕುವಂತದ್ದು ಇಂದಿನ ಯುವ ಜನಾಂಗಕ್ಕೆ ಸಾಕಷ್ಟು ಹಕ್ಕುಗಳು ಲಭ್ಯವಿದ್ದು ಶಿಕ್ಷಣ ಪಡೆಯುವ ಹಂತದಲ್ಲಿ ವಿದ್ಯಾರ್ಥಿಗಳು ಹೆತ್ತವರ ಘನತೆಗೆ ದಕ್ಕೆ ಬರದಂತೆ ಆ ಹಕ್ಕುಗಳನ್ನು ಎಚ್ಚರಿಕೆಯಿಂದ ಬಳಸಿಕೊಂಡು ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಜೀವನದಲ್ಲಿ ಯಶಸ್ಸನ್ನು ಕಾಣಬೇಕೆಂದು ವಕೀಲೆ ಸುಚಿತ ಮೂಡುಬಿದಿರೆ ಹೇಳಿದರು.

ಅವರು ಶ್ರೀ ಮಹಾವೀರ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಏಡ್ಸ್ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. 

ಐಕ್ಯೂಎಸಿ ಸಂಚಾಲಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ಪದವಿ ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜಕಿ ಶಾರದಾ, ಪದವಿ ಪೂರ್ವ ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜಕಿ ರಶ್ಮಿತಾ, ರಾಜ್ಯಶಾಸ್ತ್ರ ಉಪನ್ಯಾಸಕಿ ಪೂರ್ಣಿಮ ಉಪಸ್ಥಿತರಿದ್ದರು.  

ಸುಷ್ಮಾ ಸ್ವಾಗತಿಸಿದರು. ಅಮೂಲ್ಯ ಜೈನ್ ಕಾರ್ಯಕ್ರಮ ನಿರೂಪಿಸಿ, ಪರಮೇಶ್ವರಿ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article