ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನ: ಓವ೯ನ ಬಂಧನ

ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನ: ಓವ೯ನ ಬಂಧನ


ಮೂಡುಬಿದಿರೆ: ಇಲ್ಲಿಗೆ ಸಮೀಪದ ಮೂಡುಕೊಣಾಜೆ ಗ್ರಾಮದ ಕೈಕಂಜಿಪಡ್ಪು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮುಹಮ್ಮದ್ ರಫೀಕ್ ಬಂಧಿತ ಆರೋಪಿ. ಈತ ಗಾಂಜಾ ವ್ಯಸನಿಗಳಿಗೆ ಮಾರಾಟ ಮಾಡ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು  ಆರೋಪಿಯಿಂದ ರೂ 22,000 ಮೌಲ್ಯದ 900 ಗ್ರಾಂ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ತಂಡದಲ್ಲಿ ಎಸ್.ಐ.ಸಿದ್ದಪ್ಪ, ಎ.ಎಸ್.ಐ ಪ್ರಶಾಂತ್, ಕ್ರೈಮ್ ವಿಭಾಗದ ಸಿಬ್ಬಂಧಿಗಳಾದ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ರಾಜೇಶ್, ನಾಗರಾಜ ಲಮಾಣಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article