
ನಿಡ್ಡೋಡಿಯಲ್ಲಿ ಅನಧಿಕೃತ ಕಲ್ಲಿನ ಕೋರೆಗಳಿಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ
Tuesday, December 3, 2024
ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಡೋಡಿಯಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅನಧಿಕೃತ ಕೆಂಪು ಕಲ್ಲಿನ ಕೋರೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗೆ ದಾಳಿ ನಡೆಸಿದ್ದಾರೆ.
ಇಲ್ಲಿ ನಡೆಯುತ್ತಿರುವ ಅನಧಿಕೃತ ಕೆಂಪು ಕಲ್ಲಿನ ಕೋರೆಯ ಬಗ್ಗೆ ಸಾರ್ವಜನಿಕರು ಲೋಕಾಯುಕ್ತ ಇಲಾಖೆಗೆ ದೂರು ನೀಡಿದ್ದಾರೆನ್ನಲಾಗಿದೆ.