ಫಿಲೋಮಿನಾ ಪ.ಪೂ. ಕಾಲೇಜಿನ ಪ್ರಾರ್ಥನಾ ಬಿ. ಅವರಿಗೆ ‘ಕಲಾ ಉತ್ಸವ-2024-25’ರಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಫಿಲೋಮಿನಾ ಪ.ಪೂ. ಕಾಲೇಜಿನ ಪ್ರಾರ್ಥನಾ ಬಿ. ಅವರಿಗೆ ‘ಕಲಾ ಉತ್ಸವ-2024-25’ರಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ


ಪುತ್ತೂರು: ಎನ್.ಸಿ.ಇ.ಆರ್.ಟಿ. ನವದೆಹಲಿ ಹಾಗೂ ಶಾಲಾ ಶಿಕ್ಷಣ ಸಚಿವಾಲಯ ಭಾರತ ಸರ್ಕಾರ ಆಯೋಜಿಸಿದ 2024-25ರ ಸಾಲಿನ ಕಲಾ ಉತ್ಸವದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ. ಅವರು ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ  ಪ್ರಥಮ ಸ್ಥಾನವನ್ನು ಪಡೆದು ಜನವರಿಯಲ್ಲಿ ಮಧ್ಯ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ‘ಕಲಾ ಉತ್ಸವ-2024-25’ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರು ಪ್ರಾರಂಭದಲ್ಲಿ ವಿದುಷಿ ಡಾ. ಸುಚಿತ್ರಾ ಹೊಳ್ಳ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡಿದ್ದು, ಪ್ರಸ್ತುತ ಚೆನ್ನೈನ ಕಲೈಮಾಮಣಿ ಡಾ. ಎಸ್. ಸುಂದರ್ ಹಾಗೂ ವಿದುಷಿ ಜೆ.ಬಿ. ಕೀರ್ತನಾ ಶ್ರೀರಾಮ್ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದು, ಪುತ್ತೂರಿನ ಪ್ರಸಿದ್ಧ ದಂತ ವೈದ್ಯರಾದ ಡಾ. ಪ್ರಕಾಶ್ ಬಿ. ಇವರ ಹಿರಿಯ ಪುತ್ರಿಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ.ಎಸ್. ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article