
ಡಿ.3 ರಂದು ಉಡುಪಿಯ ಶಾಲಾ ಕಾಲೇಜುಗಳಿಗೆ ರಜೆ
Monday, December 2, 2024
ಉಡುಪಿ: ಹವಾಮಾನ ವೈಪ್ಯರೀತ್ಯದಿಂದಾಗಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಸೋಮವಾರ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಕೆಲವೆಡೆ ಮಳೆಯಾಗಿದೆ. ಗುಡುಗು ಸಿಡಿಲು ಕೂಡಾ ಇತ್ತು.