
ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
Friday, December 6, 2024
ಉಡುಪಿ: ಡಾ.ಬಿ.ಆರ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ಶುಕ್ರವಾರ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕೀರ್ಣ ಆವರಣದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ ಕುಮಾರ್ ಶೆಟ್ಟಿ ಮೊದಲಾದವರಿದ್ದರು.