ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿಗಾಗಿ ಮನವಿ
Friday, December 13, 2024
ಉಡುಪಿ: ಜಿಲ್ಲೆಗೆ ಸಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಉಡುಪಿ ಜಿಲ್ಲೆ ಸುಮಾರು 167 ಗ್ರಾ. ಪಂ. ವತ್ತು 15 ಲಕ್ಷ ಜನಸಂಖ್ಯೆ ಹೊಂದಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣವಾಗಿ ಮುಂದಿರುವ ಉಡುಪಿ ಜಿಲ್ಲೆಗೆ ಒಂದು ಸುಸಜ್ಜಿತ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದೆ. ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ, ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ. ಮತ್ತು ಉಡುಪಿ ಜನತೆಯ ಉತ್ತಮವಾದ ಆರೋಗ್ಯ ಸೇವೆಗಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತವಾದ ಸರಕಾರಿ ವೈದ್ಯಕೀಯ ಕಾಲೇಜ್ ಮಂಜೂರು ಮಾಡುವಂತೆ ಸಂಸದ ಕೋಟ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಸಚಿವ ನಡ್ಡಾ ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.