ಬೆಳಗಾವಿ ಅಧಿವೇಶನದಲ್ಲಿ ಹೊರಗುತ್ತಿಗೆ ನೌಕರರ ಧರಣಿ

ಬೆಳಗಾವಿ ಅಧಿವೇಶನದಲ್ಲಿ ಹೊರಗುತ್ತಿಗೆ ನೌಕರರ ಧರಣಿ


ಉಜಿರೆ: ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿನಿಲಯಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಸಮಿತಿ ವತಿಯಿಂದ ಡಿ.18 ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವ ವೇಳೆ ಮುಂಭಾಗದಲ್ಲಿ ಹಾಸ್ಟೆಲ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಧರಣಿ ಸ್ಥಳಕ್ಕೆ ಸರಕಾರದ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಮತ್ತು ಸಚಿವ ಶಿವರಾಜ್ ತಂಗಡಗಿ ಧರಣಿ ಸ್ಥಳಕ್ಕೆ ಬಂದು ಜನೆವರಿ 2ನೇ ವಾರದಲ್ಲಿ ಮುಖ್ಯಮಂತ್ರಿ ಜೊತೆಗೆ ಸಂಬಂಧ ಪಟ್ಟ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಘದ ಮುಖಂಡರನ್ನೊಳಗೊಂಡು ಸಭೆ ಸೇರಿ ಬೇಡಿಕೆಗಳ ಬಗ್ಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದೆಂದು  ಭರವಸೆ ನೀಡಿದ ನೀಡಿದ ಹಿನ್ನೆಲೆಯಲ್ಲಿ ಸಂಘದ ಸದಸ್ಯರು ಸಭೆ ಮಾಡಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹವನ್ನು ಹಿಂತೆಗೆದುಕೊಂಡರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article