
ಆಮಂತ್ರಣ ಪತ್ರ ಬಿಡುಗಡೆ
Sunday, December 29, 2024
ಉಜಿರೆ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ 2025ರ ಜನವರಿ 4 ಮತ್ತು 5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ನವೀನ್ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್ ಕುಮಾರ್ ಮತ್ತು ಸಮ್ಯಕ್ ಜೈನ್ ಉಪಸ್ಥಿತರಿದ್ದರು.