
‘ಶುದ್ಧನೀರು ಬಳಕೆಯಿಂದ ಆರೋಗ್ಯ ರಕ್ಷಣೆ’: ಹೇಮಾವತಿ ವೀ.ಹೆಗ್ಗಡೆ
ಉಜಿರೆ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆಎ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ವೀ.ಹೆಗ್ಗಡೆ ಹೇಳಿದರು.
ಡಿ. 4ರಂದು ರಾಜ್ಯಾದ್ಯಂತ ಶುದ್ಧಗಂಗಾ ವಿಭಾಗದಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರೊಂದಿಗೆ ಅವರು ಮಾತನಾಡಿದರು.
ಮಾನವ ಆಹಾರಇಲ್ಲದೇ 10 ದಿನವಾದರೂ ಬದುಕಬಹುದು. ನೀರಿಲ್ಲದೇ ಬದುಕಲು ಸಾಧ್ಯವಿಲ್ಲ. ನೀರು ಆರೋಗ್ಯದ ಮೇಲೆ ನೇರ ಪರಿಣಾಮವನ್ನು ಬೀರುತ್ತಿದೆ. ಅಶುದ್ಧ ನೀರನ್ನು ಕುಡಿಯುವುದರಿಂದ ಮುಖ್ಯವಾಗಿ ಮಹಿಳೆಯರ ಮತ್ತು ಮಕ್ಕಳು ಹಾಗೂ ಜನ ಸಾಮಾನ್ಯರ ಮೇಲೆ ಆಗುತ್ತಿರು ಅನಾರೋಗ್ಯ ಸಮಸ್ಯೆಯನ್ನು ಮನಗಂಡುಎಲ್ಲಿ ನೋವಿದೆಯೋ ಅಲಿ ಔಷಧಿ ನೀಡಬೇಕೆಂದು ಶುದ್ಧ ನೀರಿನ ಸಮಸ್ಯೆ ಇರುವಲ್ಲಿ ಯೋಜನೆ ಮೂಲಕ ಶುದ್ಧಕುಡಿಯುವ ನೀರಿನ ಘಟಕಗಳನ್ನುಆರಂಭಿಸಲಾಗಿದೆ.ಈ ಶುದ್ಧಗಂಗಾ ಘಟಕಗಳ ಶುದ್ಧ ನೀರನ್ನು ಬಳಸುವುದರಿಂದ ಅದೆಷ್ಟೋ ಜನರ ಆರೋಗ್ಯ ರಕ್ಷಣೆಯಾಗಿದೆ.ಮನೆಯಲ್ಲಿ ನೀರಿನ ವ್ಯವಸ್ಥೆಯ ಜವಾಬ್ದಾರಿ ಹೆಚ್ಚಾಗಿ ಮಹಿಳೆಯರಿಗೆ ಇದೆ. ಇಂದು ಶುದ್ಧ ನೀರು ಬಳಕೆಯಿಂದ ಮಹಿಳೆ ತನ್ನ ಹಾಗೂ ತನ್ನ ಕುಟುಂಬ ಆರೋಗ್ಯ ರಕ್ಷಿಸಿಕೊಳ್ಳುತ್ತಿದ್ದಾರೆ.ಶುದ್ಧ ನೀರಿನ ಬಳಕೆಯಿಂದ ಆಗಿರುವ ಬದಲಾವಣೆಯ ಬಗ್ಗೆ ಇನ್ನಷ್ಟುಜನರಿಗೆ ಮಾಹಿತಿ ನೀಡಿಅವರಲ್ಲಿ ಇಚ್ಛ್ಟಾ ಶಕ್ತಿ ಮೂಡಿಸಿ ನಿರಂತರ ಶುದ್ಧನೀರಿನ ಬಳಕೆ ಮಾಡುವಂತೆಎಲ್ಲಾಮೇಲ್ವಿಚಾರಕರು ಪ್ರಯತ್ನಿಸಿ ಜನಮನ ತಲುಪಿದರೆ ಅದು ಪುಣ್ಯದ ಕೆಲಸ.ಪ್ರತೀ ವರ್ಷಕ್ಕೊಮ್ಮೆ ಗ್ರಾಹಕರ ಸಭೆ ನಡೆಸಿ ಅವರಿಗೆ ಶುದ್ಧ ನೀರಿನ ಬಳಕೆಯಿಂದಾದ ಪ್ರಯೋಜನವನ್ನು ತಿಳಿಸಬೇಕು. ಘಟಕಗಳಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿ ನಿರಂತರಜನರಿಗೆ ಸೇವೆಯನ್ನು ನೀಡಬೇಕು ಎಂದು ತಿಳಿಸಿದರು.
ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ವಿಭಾಗದ ನಿರ್ದೇಶಕ ಶಿವಾನಂದ ಆಚಾರ್ಯ, ಯೋಜನಾಧಿಕಾರಿಗಳಾದ ಯುವರಾಜ್ಜೈನ್, ಫಕ್ಕೀರಪ್ಪ ಬೆಲ್ಲಾಮುದ್ದಿ ಉಪಸ್ಥಿತರಿದ್ದರು.