ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಳ್ಳಾಲ: ಹಲ್ಲೆ ಆರೋಪಿ ಮೇಲೆ ತಲವಾರು ದಾಳಿಗೆ ಯತ್ನಿಸಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆರೋಪಿಯನ್ನು ಅರ್ಜುನ್ ಮಾಡೂರು ಎಂದು ಗುರುತಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹೊಸಂಗಡಿ, ಕಡಂಬಾರು ನಿವಾಸಿ ಮಹಮ್ಮದ್ ಆಸೀಫ್ ಜಾಮೀನಿನಲ್ಲಿ ಜೈಲಿನಿಂದ ಹೊರ ಬರುತ್ತಲೇ ಆತನ ಮೇಲೆ ಪ್ರತೀಕಾರ ತೀರಿಸಲು ಈತ ತಲವಾರು ದಾಳಿಗೆ ಯತ್ನಿಸಿದ್ದ. ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16 ರ ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು ಉಳ್ಳಾಲ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಈ ಸಂದರ್ಭದಲ್ಲಿ ಮಧ್ಯ ರಾತ್ರಿ ಶರತ್ ಅವರ ಸ್ನೇಹಿತ ಅರ್ಜುನ್ ಮಾಡೂರು ಅವರು ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಇನ್ಸ್ಪೆಕ್ಟರ್ ಕೊಠಡಿಯೊಳಗೆ ಕಾರು ಚಾಲಕರಾದ ಶರತ್, ಖಲೀಲ್ ಜತೆ ರಾಜಿ ಮಾತುಕತೆ ನಡೆಸುತ್ತಿದ್ದ ವೇಳೆ ಖಲೀಲ್ನ ಸಹೋದರ ಆಸೀಫ್, ಅರ್ಜುನ್ ಮಾಡೂರಿಗೆ ಏಕಾ ಏಕಿ ಹಲ್ಲೆ ನಡೆಸಿದ್ದ.
ಪೊಲೀಸರು ಆರೋಪಿ ಆಸಿಫ್ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಜಾಮೀನಿನ ಮೇಲೆ ಬಿಡುಗಡೆಗೊಂಡ ಆಸಿಪ್ ತನ್ನ ಕುಟುಂಬಸ್ಥರ ಜೊತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ತಲಪಾಡಿ ಬಳಿಯ ಕೆ.ಸಿ. ರೋಡ್ನಿಂದ ಆಗಂತುಕರು ವರೆಗೆ ಮಾರಕಾಯುಧಗಳಿಂದ ಬೆನ್ನಟ್ಟಿದ್ದಾರೆಂದು ಆರೋಪಿಸಿ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಅರ್ಜುನ್ ಮಾಡೂರನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.