
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಾಹಿತ್ಯ ಸಂಭ್ರಮ
Monday, January 20, 2025
ಬಂಟ್ವಾಳ: ಸಾಹಿತ್ಯದ ಬಗೆಗಿನ ಆಸಕ್ತಿಯು ಹಾದಿ ತಪ್ಪಿಸುವುದಿಲ್ಲ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್‌ಗಳ ಮೂಲಕವೇ ನಮಗೆ ಬೇಕಾದ ಪುಸ್ತಗಳನ್ನು ಓದಬಹುದು. ಸಾಹಿತ್ಯದ ಅಧ್ಯಯನ ನಮ್ಮ ಅಂಗೈಯಲ್ಲೇ ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಹೇಳಿದರು.
ಪಾಣೆಮಂಗಳೂರಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದಿಂದ ನಡೆದ ಸಾಹಿತ್ಯ ಸಂಭ್ರಮ-೮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಾಹಿತಿ ಹಾಗೂ ಮುಖ್ಯ ಶಿಕ್ಷಕ ಜಯರಾಮ ಪಡ್ರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಲಯದ ಮೇಲ್ವಿಚಾರಕ ವಿಶ್ವನಾಥ ಉಪಸ್ಥಿತರಿದ್ದರು. ಕ.ರಾ.ಮ.ಸಾ.ಪ. ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆ ಶ್ರೀಕಲಾ ಕಾರಂತ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜತೆ ಕಾರ್ಯದರ್ಶಿ ರಶ್ಮಿತಾ ಸುರೇಶ್ ಜೋಗಿಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿಲಯದ ಸಿಬ್ಬಂದಿ ರಮೇಶ ವಂದಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಗೋಪಾಲಕೃಷ್ಣ ನೇರಳಕಟ್ಟೆ ಕವನ ರಚನೆಯ ಬಗ್ಗೆ ಮತ್ತು ತುಳಸಿ ಕೈರಂಗಳ ಕಥಾ ರಚನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸಿಕೊಟ್ಟರು.