ಶಿಥಿಲಗೊಂಡ ಸೇತುವೆ: ಕಾಮಗಾರಿ ಆರಂಭಕ್ಕೆ ವಿಳಂಬ-ಅಸಮಾಧಾನ

ಶಿಥಿಲಗೊಂಡ ಸೇತುವೆ: ಕಾಮಗಾರಿ ಆರಂಭಕ್ಕೆ ವಿಳಂಬ-ಅಸಮಾಧಾನ

ಬಂಟ್ವಾಳ: ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಘನ ವಾಹನ ಸಂಚಾರವನ್ನು  ನಿರ್ಬಂಧಗೊಳಿಸಿರುವ ಪೊಳಲಿ ಸಮೀಪದ ಅಡ್ಡೂರು ಸೇತುವೆಯ ದುರಸ್ಥಿಗೆ ಈಗಾಗಲೇ 6.00 ಕೋ.ರೂ. ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಮುಗಿದರೂ ಇನ್ನೂ ಕೂಡ ಈವರೆಗೆ ಕಾಮಗಾರಿ ಕೈಗೆತ್ತಿಕೊಳ್ಳದಿರುವುದರ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು  ಬೆಂಗಳೂರಿನಲ್ಲಿ ನಡೆದ ಭರವಸೆಗಳ ಸಮಿತಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭರವಸೆಗಳ ಸಮಿತಿ ಅಧ್ಯಕ್ಷರಾದ ಕೆ. ವೈ. ನಂಜೇಗೌಡ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಾಜೇಶ್ ನಾಯ್ಕ್ ಅವರು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣವೇ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಕರ್ನಾಟಕ ವಿಧಾನ ಸಭೆಯ ಭರವಸೆಗಳ ಸಮಿತಿ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಬಗ್ಗೆ ಚರ್ಚೆಯ ವೇಳೆ ಶೀಥಿಲಾವಸ್ಥೆಯ ಪೊಳಲಿ ಸೇತುವೆ ದುರಸ್ಥಿ ಕಾರ್ಯ ಕೈಗೆತ್ತಿಕೊಳ್ಳದ  ಕುರಿತು ಗರಂ ಆದ ಶಾಸಕರು ಟೆಂಡರ್ ಪ್ರಕ್ರಿಯೇ ಮುಗಿದರೂ ಇನ್ನು ಕೂಡ ಕಾಮಗಾರಿ ಆರಂಭಿಸದಿರುವುದನ್ನು ಅಧಿಕಾರಿಗಳಲ್ಲಿ ಪ್ರಶ್ನಿಸಿದರಲ್ಲದೆ ಸೇತುವೆಯಲ್ಲಿ ಘನವಾಹನ ಸಂಚಾರ ನಿರ್ಬಂಧಿಸಿರುವುದರಿಂದ ಸಾರ್ವಜನಿಕರಿಗಾಗುತ್ತಿರುವ ತೊಂದರೆಯ ಬಗ್ಗೆ  ಗಮನಸೆಳೆದು ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.

ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸಿ. ಸತ್ಯನಾರಾಯಣ ಅವರು ಪೊಳಲಿ ಸೇತುವೆಯ ದುರಸ್ಥಿ ಕಾಮಗಾರಿಯನ್ನು  ಮೂರು ದಿನಗಳ ಒಳಗಾಗಿ ಕೈಗೆತ್ತಿಕೊಳ್ಳಲಾಗುವುದಲ್ಲದೆ ಈ ಸೇತುವೆಯ ಪುನರ್ ನಿರ್ಮಾಣಕ್ಕಾಗಿ 50.00 ಕೋಟಿ ರೂ.ವಿನ ಪ್ರಸ್ತಾವನೆಯನ್ನು ಕೂಡ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

 ಕರ್ನಾಟಕ ವಿಧಾನ ಸಭೆ ಸಚಿವಾಲಯ ಭರವಸೆಗಳ ಸಮಿತಿ ಅಧೀನ ಕಾರ್ಯದರ್ಶಿ ಎಸ್. ರಾಜಣ್ಣ, ಲೋಕೋಪಯೋಗಿ ಇಲಾಖೆ ಐಎಫ್‌ಎ ಡಾ. ಸೋಮನಾಥ್, ಕೆ.ಆರ್.ಡಿ.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಲಿಂಗಮೂರ್ತಿ ಜಿ., ರಾಜ್ಯ ಹೆದ್ಧಾರಿ ಯೋಜನಾ ನಿರ್ದೇಶಕರಾದ ಜಗನ್ನಾಥ ಹಾಗೂ ಶಿವಮೊಗ್ಗ ಸರ್ಕಲ್ ಮತು ಮಂಗಳೂರು ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಗಸ್ಟ್ ನಿಂದ ಸಂಚಾರ ನಿರ್ಬಂಧಿಸಲಾಗಿತ್ತು:

ಅಡ್ಡೂರು ಸೇತವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಕಳೆದ ಆಗಸ್ಟ್ನಲ್ಲಿ ದ.ಕ. ಜಿಲ್ಲಾಧಿಕಾರಿಯವರು ಈ ಸೇತುವೆಯಲ್ಲಿ ಬಸ್ ಸೇರಿದಂತೆ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದ್ದಾರೆ.

ಬಸ್ಸು ಸಂಚಾರ ಇಲ್ಲದೆ ಪ್ರತಿನಿತ್ಯ ಶಾಲಾ-ಕಾಲೇಜು,ಕೆಲಸಕ್ಕೆ ತೆರಳುವ ಕಾರ್ಮಿಕರು,ಸಾರ್ವಜನಿಕರು ಹಾಗೂ ಪ್ರಸಿದ್ದ ಪೊಳಲಿ ರಾಜಾರಾಜೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಮತ್ತು ಸ್ಥಳೀಯ ಪರಿಸರದವರಿಗೆ ತೊಂದರೆಯಾಗಿರುತ್ತದೆ. 

ಈ ಸೇತುವೆಯ ಪುನರ್ ನಿರ್ಮಾಣಕ್ಕೆ ರೂ. 50.00 ಕೋಟಿ ಬೇಕಾಗಿದ್ದು, ತಕ್ಷಣದ ಪರಿಹಾರಕ್ಕಾಗಿ ಸೇತುವೆ ದುರಸ್ಥಿಗೆ 6.00 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದರೂ ಕಾಮಗಾರಿ ಮಾತ್ರ ಇನ್ನು  ಆರಂಭವಾಗಿಲ್ಲ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article