
ಆಭರಣ ಕಳವು ಪ್ರಕರಣ: ಇಬ್ಬರು ಕಳ್ಳರ ಬಂಧನ
Wednesday, January 22, 2025
ಗಂಗೋಳ್ಳಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಗ್ರಾಮದಲ್ಲಿ ಜ.21 ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ 7 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ತ್ರಾಸಿ ಬೀಚ್ ಬಳಿ ಮನೆಯೊಂದರ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್‌ನ ಜಿಪ್ ತೆಗೆದು ಬ್ಯಾಗ್ ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 16 ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷದ ಆಭರಣ ಕಳವಾಗಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪಿಎಸ್ಐ ಹರೀಶ್ ಆರ್. ಹಾಗೂ ಸಿಬ್ಬಂದಿಗಳಾದ ಶಾಂತಾರಾಮ, ರಾಜು, ನಾಗರಾಜ, ರಾಘವೇಂದ್ರ, ಸಂದೀಪ ಕುರಣಿ, ಮಾರುತಿ ನಾಯ್ಕ, ದಿನೇಶ್ ಅವರ ತಂಡ ಕಾರ್ಯಾಚರಣೆ ನಡೆಸಿ ಮನೆ ಕಳ್ಳತನದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಜ. 21 ರಂದು ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳಾದ ಗುಜ್ಜಾಡಿ ನಿವಾಸಿ ವಿನಾಯಕ(41), ಪ್ರಮೀಳಾ(30) ಎನ್ನುವರನ್ನು ವಶಕ್ಕೆ ಪಡೆದು ಆರೋಪಿಗಳು ಕಳವುಗೈದ 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.