
ಜ.11 ರಂದು ಕುಂದಾಪುರದಲ್ಲಿ ಬಂಟ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ
Thursday, January 9, 2025
ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಜನವರಿ 11 ರಂದು ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಬಂಟ ಸಾಧಕ ಪ್ರಶಸ್ತಿ ಪ್ರದಾನ ಹಾಗೂ ಅರಿವು ಯೋಜನೆಯಡಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ಸಾಧನಗಳ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.