‘ಅಧಿಕ ಹಾಲು ಕರೆಯುವ ಸ್ಪರ್ಧೆ’ ಉದ್ಘಾಟಿಸಿದ ಶಾಸಕ ಗುರುರಾಜ್ ಗಂಟಿಹೊಳೆ

‘ಅಧಿಕ ಹಾಲು ಕರೆಯುವ ಸ್ಪರ್ಧೆ’ ಉದ್ಘಾಟಿಸಿದ ಶಾಸಕ ಗುರುರಾಜ್ ಗಂಟಿಹೊಳೆ


ಕುಂದಾಪುರ: ಬೈಂದೂರು ತಾಲೂಕು ಬಗ್ವಾಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್, ಪಶು ಸಂಗೋಪನಾ ಇಲಾಖೆ, ಕುಂದಾಪುರ, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್, ಹಕ್ಲಾಡಿ ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಮತ್ತು ಬಗ್ವಾಡಿ, ಕಟ್‌ಬೇಲ್ತೂರು, ನೂಜಾಡಿ ಮತ್ತು ಕುಂದಬಾರಂದಾಡಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ದೆ’ಯನ್ನು ನಡೆಸಲಾಯಿತು.  

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸ್ಪರ್ಧೆಯನ್ನು ದನದ ಹಾಲು ಕರೆಯುವ ಮೂಲಕವೇ ಉದ್ಘಾಟಿಸಿ ಮಾತನಾಡಿ, ನಾನು ಚಿಕ್ಕವನಿರುವಾಗಲೇ ಹೈನುಗಾರಿಕೆಯ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದು, ಹಸುಗಳೆಂದರೆ ನನಗೆ ಬಹಳ ಪ್ರೀತಿ. ಹಿಂದಿನ ಕಾಲದಲ್ಲಿ ನಮ್ಮೂರಿನಲ್ಲಿರುವ ಹೊಳೆಯ ನೀರನ್ನು ಕುಡಿಯುವದಕ್ಕಾಗಿ ಹಲವಾರು ಗಂಟಿಗಳು(ದನ ಕರುಗಳು) ಬರುತ್ತಿದ್ದ ಕಾರಣದಿಂದ ನನ್ನ ಹುಟ್ಟೂರಿಗೆ ಗಂಟಿಹೊಳೆ ಎಂಬ ಹೆಸರು ಬಂದಿದೆ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದರು.

ಹೈನುಗಾರಿಕೆಯನ್ನು ವೈಜ್ಙಾನಿಕ ರೀತಿಯಲ್ಲಿ ಮಾಡುವುದರಿಂದ ಯಶಸ್ಸನ್ನು ಗಳಿಸಲು ಸಾಧ್ಯವಿದೆ. ಪಶುಪಾಲನಾ ಇಲಾಖೆಯಲ್ಲಿ ಪಶುವೈದ್ಯರ ಕೊರತೆಯಿದ್ದು, ಪ್ರತೀ 4000 ಜಾನುವಾರುಗಳಿಗೆ ಓರ್ವ ಪಶುವೈದ್ಯರನ್ನು ನೇಮಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ. ಅಲ್ಲದೇ, ಪಶುಸಖಿಯರ  ಸೇವೆಯಿಂದ ಹೈನುಗಾರರಿಗೆ ಪ್ರಯೋಜನವಾಗಿದ್ದುಅವರಿಗೆ ಇನ್ನೂ ಹೆಚ್ಚಿನ ತರಬೇತಿಯ ಅವಶ್ಯಕತೆ ಇದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಪ್ರಕಾಶ್‌ಚಂದ್ರ ಶೆಟ್ಟಿಯವರು, ಇತ್ತೀಚಿನ ದಿನಗಳಲ್ಲಿ ಹೈನುಗಾರರು ನಷ್ಟ ಅನುಭವಿಸಲು ಕಾರಣಗಳೇನು ಎನ್ನುವುದರ ಬಗ್ಗೆ ಸವಿವರವಾಗಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರ ತಾಲೂಕು ಕೆ.ಡಿ.ಪಿ. ಸಮಿತಿಯ ಸದಸ್ಯ ಶರತ್ ಕುಮಾರ್ ಶೆಟ್ಟಿ, ಹೈನುಗಾರರು ಸಹಕಾರಿ ಸಂಘಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದು ಹೈನುಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕರೆ ನೀಡಿದರು. ಹಾಲು ಉತ್ಪಾದಕರ ಒಕ್ಕೂಟ, ಕುಂದಾಪುರ ವಿಭಾಗದ ಉಪವ್ಯವಸ್ಥಾಪಕ ಶಂಕರ ನಾಯ್ಕ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಎಂ.ಸಿ. ರೆಡ್ಡಪ್ಪ ಇಲಾಖೆಯ ವಿವಿಧ ಕಾರ್ಯಚಟುವಟಿಕೆಗಳ ಕುರಿತಾದ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರ ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಬಾಬಣ್ಣ ಪೂಜಾರಿ, ಹಾಲು ಕರೆಯುವ ಸ್ಪರ್ಧೆಯ ಕುರಿತಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹೆಮ್ಮಾಡಿ ಪಶುಚಿಕಿತ್ಸಾಲಯದ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯ ಪಶುವೈದ್ಯಾಧಿಕಾರಿಗಡಾ. ಅರುಣ್. ಕೆ.ಪಿ. ಸ್ವಾಗತಿಸಿದರು. ಈ ಸ್ಪರ್ಧೆಯಲ್ಲಿ ಎಚ್.ಎಫ್., ಜೆರ್ಸಿ ಮುಂತಾದ ತಳಿಯ ವರ್ಗದಲ್ಲಿ ವಿಜೇತರಾದ ಹಸುಗಳ ಮಾಲೀಕರಿಗೆ ಬಹುಮಾನಗಳನ್ನು ವಿತರಿಸಲಾಯಿತು. 

ಬಗ್ವಾಡಿ, ಕುಂದಬಾರಂದಾಡಿ, ನೂಜಾಡಿ ಮತ್ತು ಕಟ್‌ಬೇಲ್ತೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಕುಂದಾಪುರ ವಿಭಾಗದ ವಿಸ್ತರಣಾಧಿಕಾರಿ ವಾಸು ಪುರಾಣಿಕ್ ಕಾರ್ಯಕ್ರಮವನ್ನು ನಿರೂಪಿಸಿದರು.

ಹುಣ್ಸೆಮಕ್ಕಿ ಪಶುಚಿಕಿತ್ಸಾಲಯದ ಮುಖ್ಯ ಪಶುವೈದ್ಯಾಧಿಕಾರಿ ಡಾ. ಜಯಣ್ಣ, ಇಲಾಖೆಯ ಸಿಬ್ಬಂದಿ ವರ್ಗದವರು, ಹೊರಗುತ್ತಿಗೆ ಸಿಬ್ಬಂದಿ ವರ್ಗದವರು, ಪಶು ಸಖಿಯರು, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article