ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರಧಾನ

ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರಧಾನ


ಕುಂದಾಪುರ: ಸೇವಾ ಚೇತನ ಟ್ರಸ್ಟ್ (ರಿ) ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜ.11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ನಮ್ಮೂರ ಸಂಭ್ರಮ ಕಾರ್ಯಕ್ರಮದಲ್ಲಿ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2024ರ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರಧಾನವನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ, ಜಯದೇವ ಹೃದ್ರೋಗ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಪ್ರಶಸ್ತಿ ಪ್ರದಾನ ಮಾಡಿದರು. 

ಸೌತ್ ಫೀಲ್ಡ್ ಪೇಂಟ್ಸ್ ನ ಆಡಳಿತ ನಿರ್ದೇಶಕ ಎಸ್.ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿ.ಎ. ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ, ಬೆಂಗಳೂರಿನ ಹಿರಿಯ ಉದ್ಯಮಿ ಆನಗಳ್ಳಿ ಕರುಣಾಕರ ಹೆಗ್ಡೆ, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಆಸ್ಟ್ರೇಲಿಯಾದ ಉದ್ಯಮಿ ಅಜ್ರಿ ತಗ್ಗುಂಜೆಮನೆ ದಯಾನಂದ ಶೆಟ್ಟಿ, ಮೆರಿಟಿ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಮುಂಬೈನ ಆಡಳಿತ ನಿರ್ದೇಶಕ ಅಶೋಕ್ ಶೆಟ್ಟಿ ಬೆಳ್ಳಾಡಿ, ಗೋಲ್ಡನ್ ಫೋರ್ಕ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಆದರ್ಶ ಶೆಟ್ಟಿ ಹಾಲಾಡಿ, ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ, ಸೇವಾ ಚೇತನ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಸಂತೋಷ್ ಶೆಟ್ಟಿ ಮೂಡುಬಗೆ, ಅಧ್ಯಕ್ಷರಾದ ಅರುಣ್ ಶೆಟ್ಟಿ ಕಂಚಾರು, ಅಶೋಕ್ ನಾಯ್ಕ, ಪ್ರದಾನ ಕಾರ್ಯದರ್ಶಿ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article