.jpeg)
ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ: 14 ದಿನ ನ್ಯಾಯಾಂಗ ಬಂಧನ
Friday, January 24, 2025
ಮಂಗಳೂರು: ನಗರದ ಬಿಜೈ ಕೆಎಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆಯ ಆರೋ ಪದಲ್ಲಿ ದಾಳಿ ನಡೆಸಿ ಬಂಧನಕ್ಕೆ ಒಳಗಾದ ರಾಮಸೇನೆಯ 14 ಮಂದಿ ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಶುಕ್ರವಾರ ನ್ಯಾಯಾಂಗ ಬಂಧನ ವಿಧಿಸಿದೆ.
ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಗುರುವಾರ ಮಧ್ಯಾಹ್ನ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಕಾರ್ಯರ್ತರು ದಾಳಿ ನಡೆಸಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳನ್ನು ಹಾನಿ ಮಾಡಿದ್ದರು. ಅಲ್ಲದೆ ಸೆಲೂನ್‌ನಲ್ಲಿದ್ದ ಯುವಕ ಹಾಗೂ ಯುವತಿಯರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿ ಪರಾರಿಯಾಗಿದ್ದರು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಘಟನೆ ನಡೆದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಶುಕ್ರವಾರ 14 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.