ಜ.19ರಂದು ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’

ಜ.19ರಂದು ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’

ಮಂಗಳೂರು: ಸೇವಾ ಭಾರತಿಯ ಅಂಗಸಂಸ್ಥೆಯಾದ ಆಶಾ ಜ್ಯೋತಿ ಇದರ ನೇತೃತ್ವದಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’ ಜ.19ರಂದು ಬೆಳಗ್ಗೆ 8.30ರಿಂದ ಸಂಜೆ 4.15ರವರೆಗೆ ಡೊಂಗರಕೇರಿ ಕೆನರಾ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ. 

ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಮೇಳಕ್ಕೆ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ರಾಮ ಕುಮಾರ್ ಬೇಕಲ್, ಲಂಚುಲಾಲ್ ಕೆ.ಎಸ್ ಭಾಗವಹಿಸಲಿದ್ದಾರೆ ಎಂದು ಆಶಾಜ್ಯೋತಿ ಇದರ ಗೌರವಾಧ್ಯಕ್ಷ ಡಾ. ವಿ. ಮುರಳೀಧರ ನಾಯಕ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೇವಾ ಭಾರತಿ ಸಂಸ್ಥೆ ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಮಟ್ಟ ಸುಧಾರಿಸಲು ಶ್ರಮಿಸುತ್ತಾ ಬಂದಿದೆ. ಇದರ ಅಂಗ ಸಂಸ್ಥೆಯಾದ ಆಶಾಜ್ಯೋತಿಯು 1998ರಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಈ ಪೈಕಿ ವಿಶಿಷ್ಟರಿಗಾಗಿ ವಿಶೇಷ ಮೇಳವೂ ಒಂದು. ವಿಶೇಷ ಚೇತನರನ್ನು ಒಟ್ಟು ಸೇರಿಸಿ ಅವರಿಗೆ ಮನರಂಜನೆ ಒದಗಿಸುವ ಜೊತೆಗೆ ಅವರಲ್ಲಿ ಚೈತನ್ಯ, ಆತ್ಮವಿಶ್ವಾಸ ತುಂಬುವುದು ಮೇಳದ ಉದ್ದೇಶ. ಕಳೆದ ವರ್ಷ 1200 ಮಂದಿ ವಿಶೇಷ ಚೇತನರು ಹಾಗೂ 1600 ಮಂದಿ ಹೆತ್ತವರು ಸೇರಿದಂತೆ 2800ಕ್ಕೂ ಅಧಿಕ ಮಂದಿ ಮೇಳದಲ್ಲಿ ಭಾಗವಹಿಸಿದ್ದರು. ಈ ವರ್ಷವೂ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಹೇಳಿದರು.

ದಿವ್ಯಾಂಗರಲ್ಲಿರುವ ಸುಪ್ತ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವುದು, ಅವರನ್ನು ಸ್ವಾವಲಂಬಿಗಳನ್ನಾ ಮಾಡುವುದು,  ಪೋಷಕರಲ್ಲಿ ಆತ್ಮ ವಿಶ್ವಾಸ ತುಂಬುವುದು, ಅಂಗವಿಕಲತೆಯ ಗುರುತು ಚೀಟಿಯನ್ನು ಪಡೆಯಲು ಸಹಕರಿಸುವುದು, ಅವರಿಗಾಗಿ ವೈದ್ಯಕೀಯ ತಪಾಸಣಾ ಶಿಬಿರ, ಆಪ್ತ ಸಲಹಾ ಶಿಬಿರಗಳನ್ನು ನಡೆಸುವುದು, ಸರಕಾರಿ ಹಾಗೂ ಅರೆ ಸರಕಾರಿ ಸಂಸ್ಥೆಗಳಿಂದ ದಿವ್ಯಾಂಗರಿಗೆ ಸಿಗುವ ಮಾಹಿತಿ ಒದಗಿಸುವುದು, ವಿಶೇಷ ಸಾಧನೆ ಮಾಡಿದ ದಿವ್ಯಾಂಗರನ್ನು ಸನ್ಮಾನಿಸುವುದು ಇತ್ಯಾದಿ ಕಾರ್ಯಕ್ರಮಗಳನ್ನು ಸೇವಾ ಭಾರತಿ ಸಂಸ್ಥೆ ಆಯೋಜಿಸುತ್ತಾ ಬಂದಿದೆ ಎಂದವರು ಹೇಳಿದರು.

ಆಶಾಜ್ಯೋತಿ ಸಂಸ್ಥೆಯ ಅಧ್ಯಕ್ಷೆ ಗೀತಾ ಲಕ್ಷ್ಮೀಶ್, ಕಾರ್ಯದರ್ಶಿ ಎಸ್.ರವಿನಾಥ ಕುಡ್ವ, ಜೊತೆ ಕಾರ್ಯದರ್ಶಿ ಗಣರಾಜ ವೈ,  ಕೋಶಾಧಿಕಾರಿ ಕೆ.ವಿಶ್ವನಾಥ ಪೈ, ಜೊತೆ ಕೋಶಾಧಿಕಾರಿ ಬಿ.ಅಶ್ವತ್ಥಾಮ ರಾವ್, ಸೇವಾ ಭಾರತಿಯ ಗೌರವಾ ಕಾರ್ಯದರ್ಶಿ ಎಚ್.ನಾಗರಾಜ ಭಟ್, ಕೋಶಾಧಿಕಾರಿ ಪಿ.ವಿನೋದ್ ಶೆಣೈ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article