45ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ

45ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ


ಮಂಗಳೂರು: ಮಂಗಳೂರು ನಗರದ ವಿವಿಧ ವಾರ್ಡ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ 45ಕ್ಕೂ ಅಧಿಕ ಕಾರ್ಯಕರ್ತರು, ವಿವಿಧ ಸಂಘಟನೆಗಳ ರಿಕ್ಷಾ ಚಾಲಕ-ಮಾಲೀಕರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ಕಾಂಗ್ರೆಸ್ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೊ, ಮಿಥುನ್ ರೈ, ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಲಾಯಿತು.


ಬಳಿಕ ಮಾತನಾಡಿದ ಐವನ್ ಡಿಸೋಜ, ವಸಂತ ಶೆಟ್ಟಿ ವೀರನಗರ ಅವರ ನೇತೃತ್ವದಲ್ಲಿ ಆಗಮಿಸಿದ ಎಲ್ಲರನ್ನು ಪಕ್ಷಕ್ಕೆ ಆತ್ಮೀಯವಾಗಿ ಸೇರ್ಪಡೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಸಕ್ರಿಯವಾಗಿ ಹೆಚ್ಚಿನ ಕೆಲಸ ಮಾಡುವಂತೆ ಸಲಹೆ ನೀಡಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ದುರ್ಬಲ ವರ್ಗಗಳಿಗಾಗಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುವ ಕಾಂಗ್ರೆಸ್ ಜತೆಗೆ ಬಹುತೇಕ ಎಲ್ಲ ರಿಕ್ಷಾ ಚಾಲಕರಿದ್ದರು. ಬಿಜೆಪಿಯ ಸುಳ್ಳುಗಳಿಂದಾಗಿ ಆಕರ್ಷಿತರಾಗುವ ಕಾಲ ಬಂದಿದ್ದರಿಂದ ಕೊಂಚ ಬದಲಾವಣೆಯಾಗಿದೆ. ಆದರೆ ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಬದಲಾಗಲ್ಲ. ಬಡವರಿಗಾಗಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಿದೆ ಎಂದು ಹೇಳಿದರು.


ತ್ರಿಚಕ್ರ ವಾಹನ ಹಸ್ತಾಂತರ:

ಇದೇ ಸಂದರ್ಭ ವಿಧಾನ ಪರಿಷತ್ ಶಾಸಕರ ನಿಧಿಯಿಂದ ಮೂಡುಬಿದಿರೆಯ ವಿಕಲಚೇತನ ವ್ಯಕ್ತಿಯೊಬ್ಬರಿಗೆ ಸ್ಕೂಟರ್ (ತ್ರಿಚಕ್ರ)ನ್ನು ಉಚಿತವಾಗಿ ಹಸ್ತಾಂತರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article