
ಜ.6 ರಂದು ಎಸ್‌ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆಯ ಸ್ಥಳಾಂತರ
ಮಂಗಳೂರು: ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., (ಎಸ್‌ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಾ ಬರುತ್ತಿದೆ. ಇದೀಗ ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶಾಖೆಯು ಈಗ ಇರುವ ಕಟ್ಟಡದಿಂದ ಕಲ್ಲಡ್ಕ ಮುಖ್ಯರಸ್ತೆಯಲ್ಲಿರುವ ‘ಕಾವೇರಿ ಸಂಕೀರ್ಣ’ದ ನೆಲ ಅಂತಸ್ತು ಕಟ್ಟಡಕ್ಕೆ ಜ.6 ರಂದು ಬೆಳಗ್ಗೆ 11 ಗಂಟೆಗೆ ಸ್ಥಳಾಂತರಗೊಳ್ಳಲಿದೆ.
ಸ್ಥಳಾಂತರಗೊಳ್ಳುವ ಈ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಲಿರುವರು. ಸಮಾರಂಭದಲ್ಲಿ ಶಾಖಾ ಕಟ್ಟಡದ ಮಾಲಕ ವರದರಾಯ ಪ್ರಭು ಇವರು ಗೌರವ ಉಪಸ್ಥಿತಿ ವಹಿಸಲಿರುವರು.
ಈ ಶಾಖೆಯು ಸಂಪೂರ್ಣ ಗಣಕೀಕೃತಗೊಂಡು, ಏಕಗವಾಕ್ಷಿ, ಕೋರ್ ಬ್ಯಾಂಕಿಂಗ್ ಹಾಗೂ ಆರ್‌ಟಿಜಿಎಸ್ ಮತ್ತು ನೆಫ್ಟ್ ಸೌಲಭ್ಯಗಳೊಂದಿಗೆ ಕಾರ್ಯಾರಂಭಗೊಳ್ಳಲಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.