
ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ
Sunday, January 26, 2025
ಮಂಗಳೂರು: ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು ಧ್ವಜಾರೋಹಣವನ್ನು ನೆರವೇರಿಸಿ, ಸಂವಿಧಾನ ಮತ್ತು ಮತದಾನದ ಮಹತ್ವದ ಬಗ್ಗೆ ಮಾತನಾಡಿದರು.
ಕಾಲೇಜಿನ ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡಿದರು. ವಿದ್ಯಾರ್ಥಿನಿ ನಯನ ಅವರು ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ಎನ್‌ಎಸ್‌ಎಸ್, ರೆಡ್‌ಕ್ರಾಸ್‌ನ ಸ್ವಯಂ ಸೇವಕರು ಇದ್ದರು.
ಡಾ. ಲೋಕೇಶ್‌ನಾಥ್ ಸ್ವಾಗತಿಸಿದರು. ಡಾ. ಜ್ಯೋತಿ ಪಿ. ನಿರೂಪಿಸಿದರು. ಡಾ. ಮೋಹನ್‌ದಾಸ್ ವಂದಿಸಿದರು.