
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ 76ನೇ ಗಣರಾಜ್ಯೋತ್ಸವ
Monday, January 27, 2025
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರವಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸುವಲ್ಲಿ ನಮ್ಮವರ ತ್ಯಾಗ, ಬಲಿದಾನವಿದೆ. ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಪ್ರಜಾಪ್ರಭುತ್ವದಿಂದ ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಳಸಬೇಕು ಎಂದು ಹೇಳಿದರು.
ಈ ಸಂದರ್ಭ ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಂ, ಮಾಜಿ ಶಾಸಕ ಜೆ.ರ್. ಲೋಬೊ, ಮುಖಂಡರಾದ ಪದ್ಮರಾಜ್ ಆರ್., ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ, ಜೆ. ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ಕೆ.ಕೆ. ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಬಿ.ಎಂ. ಅಬ್ಬಾಸ್ ಅಲಿ, ದಿನೇಶ್ ಮೂಳೂರು, ಮ.ನ.ಪಾ ಸದಸ್ಯರು, ಕಾಂಗ್ರೆಸ್ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜ ಧ್ವಜ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದರು.