
ಉಡುಪಿ ಮೂಲದ ವ್ಯಕ್ತಿಗೆ ಮಂಕಿಫಾಕ್ಸ್ ದೃಢ: ಮಂಗಳೂರಿನಲ್ಲಿ ಚಿಕಿತ್ಸೆ
ಮಂಗಳೂರು: ಉಡುಪಿ ಮೂಲದ 40ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿದ್ದು, ಅವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (NIV)ಯು ಕಾರ್ಕಳ (ಉಡುಪಿ ಜಿಲ್ಲೆ) ಮೂಲದ 40 ವರ್ಷದ ಪುರುಷನಲ್ಲಿ ಮಂಕಿಪಾಕ್ಸ್ (MPox) ಇದೆಯೆಂದು ದೃಢಪಡಿಸಿದೆ. ಕಳೆದ 19ವರ್ಷಗಳಿಂದ ದುಬೈನಲ್ಲಿ ವಾಸಿಸುತ್ತಿರುವ ಆ ವ್ಯಕ್ತಿ ಜನವರಿ 17ರಂದು ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ದದ್ದುಗಳ ಲಕ್ಷಣಗಳು ಕಂಡುಬಂದಿತ್ತು. 2ದಿನಗಳ ಹಿಂದೆ ಅವರಿಗೆ ಜ್ವರ ಬಂದಿತ್ತು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಆ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ, ಯಾವುದೇ ಗಂಭೀರ ಅಪಾಯಗಳಿಲ್ಲ. ಶೀಘ್ರವೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ರೋಗಿಯನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ 36ವರ್ಷದ ಪತ್ನಿಯನ್ನು ಪ್ರಾಥಮಿಕ ಸಂಪರ್ಕವಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರಿಗೆ ಯಾವುದೇ ಲಕ್ಷಣಗಳು ಕಾಣಿಸಿಕೊಂಡರೆ ಸೂಚಿಸಲು ತಿಳಿಸುವಂತೆ ತಿಳಿಸಿ ಕೆಲವು ದಿನಗಳವರೆಗೆ ಅವರನ್ನು ಪ್ರತ್ಯೇಕವಾಗಿ ಇರಿಸಲು ಸೂಚಿಸಲಾಗಿದೆ. ಅಲ್ಲದೆ ಅಲ್ಲದೆ ಆ ವ್ಯಕ್ತಿಯೊಂದಿಗೆ ವಿಮಾನದಲ್ಲಿ ಮುಂಭಾಗ ಹಾಗೂ ಹಿಂಭಾಗದ ಸೀಟ್‌ನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಗೂ ಪ್ರತ್ಯೇಕವಾಗಿ ಇರುವಂತೆ ಸೂಚಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.