
ಡಾ. ಪಿ ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ದಶಮ ಸಂಭ್ರಮ
Friday, January 3, 2025
ಮಂಗಳೂರು: ಮಂಗಳೂರಿನ ರಥಬೀದಿಯ ಡಾ. ಪಿ ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ (ರಿ)ದ ದಶಮ ಸಂಭ್ರಮದ ಅಂಗವಾಗಿ ಲೋಗೋ ಅನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಮತ್ತು ಕೆ ಸೆಟ್-ನೆಟ್ ಪರೀಕ್ಷಾ ಪೂರ್ವ ತಯಾರಿ ಮಾಹಿತಿ ಕಾರ್ಯಗಾರ ಜ.3 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಶೇಷಪ್ಪ ಕೆ. ಅವರು ದಶಮ ಸಂಭ್ರಮದ ಲೋಗೋ ಅನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಮುಖ್ಯ ಅತಿಥಿ ಮಂಗಳೂರಿನ ಶ್ರೀ ಗೋಕರ್ಣಾಥೇಶ್ವರ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಯತೀನ್ ಅವರು ಕೆ ಸೆಟ್-ನೆಟ್ ಪರೀಕ್ಷಾ ಪೂರ್ವ ತಯಾರಿ ಮಾಹಿತಿ ಕಾರ್ಯಗಾರವನ್ದನು ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಸ್ನಾತಕೋತ್ತರ ವಿಭಾಗ ಸಂಯೋಜಕ ಡಾ. ಲೋಕೇಶ್ ನಾಥ್, ಐಕ್ಯೂಎಸಿ ಸಹಸಂಯೋಜಕಿ ಡಾ. ಜ್ಯೋತಿಪ್ರಿಯ, ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕ ನಾಗರಾಜ್ ಎಂ. ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸುದೀಕ್ಷ ಪ್ರಾರ್ಥನೆ ನೆರವೇರಿಸಿದರು. ಆದಿತ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ತುಷಾರ್ ಕೆ. ವಂದಿಸಿದರು.
ಸ್ನಾತಕೋತ್ತರ ವಿಭಾಗದ ಸುಮಾರು 150ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿದರು.