ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ


ಮಂಗಳೂರು: ಕೆ.ಸಿ. ರೋಡ್ ಕೋಟೆಕರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ  ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ  ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ಪಶ್ಚಿಮ ವಲಯದ ಐಜಿ ಅಮಿತ್ ಸಿಂಗ್, ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಎಸ್.ಪಿ. ಯತೀಶ್, ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು. 

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article