
ಶಕ್ತಿ ಪಿ.ಯು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ
ಮಂಗಳೂರು: ಮಂಗಳೂರಿನ ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜಿನಲ್ಲಿ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಕೆ.ಸಿ ನಾಕ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಕ್ತಿ ಶಿಕ್ಷಣ ಸಂಸ್ಥೆ ಕೆಲವೇ ವರ್ಷಗಳಲ್ಲಿ ಉತ್ತಮವಾದ ಬೆಳವಣಿಗೆಯನ್ನು ಕಂಡಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳೇ ಪ್ರಮುಖ ಪಾತ್ರ ವಹಿಸಿದ್ದಾರೆ. ಶಕ್ತಿ ಸಂಸ್ಥೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತು ನಿರೀಕ್ಷಿತ ಫಲಿತಾಂಶವನ್ನು ಪಡೆದು ತೃಪ್ತಿಯಿಂದ ಹೋಗಬೇಕೆನ್ನುವುದೇ ನನ್ನ ಆಸೆ. ವಿದ್ಯಾರ್ಥಿಗಳಿಗಾಗಿ ಯಾವುದೇ ಸವಲತ್ತುಗಳನ್ನು ಒದಗಿಸಲು ನಾನು ಸದಾ ಸಿದ್ದ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗಾಗಿ ಹೊಸ ಯೋಚನೆ-ಯೋಜನೆಗಳು ಕಾರ್ಯಪ್ರವೃತ್ತವಾಗುತ್ತಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶಮೂರ್ತಿ ಎಚ್. ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಮಕ್ಕಳಿಗೆ ಶುಭ ಹಾರೈಸಿದರು.
ಹಿರಿಯ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಮೆಲುಕು ಹಾಕಿದರು. ಉಪನ್ಯಾಸಕರಾದ ಗಣೇಶ್ ಮಿರ್ಜಿ, ಸ್ವಾತಿ, ಅಕ್ಷತಾ ಎಸ್. ವಿದ್ಯಾರ್ಥಿಗಳಿಗೆ ವಿದಾಯದ ಮಾತುಗಳನ್ನಾಡಿದರು. ಪ್ರಥಮ ವರ್ಷದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿನೋದ ಆಟಗಳನ್ನು ಆಯೋಜಿಸಲಾಗಿತ್ತು.