.jpeg)
ಆಯುಷ್ಮಾನ್ ಭಾರತ್ ಯೋಜನೆಗೆ ಒಪ್ಪಿಗೆ ನೀಡದ ರಾಜ್ಯ ಸರ್ಕಾರ: ಹಿರಿಯರಿಗೆ ವಂಚನೆ
Wednesday, January 8, 2025
ಮಂಗಳೂರು: ಒಂದೆಡೆ ಕಾಂಗ್ರೆಸ್ ಸರಕಾರ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿ ದಿನಕ್ಕೊಂದು ಹೊಸ ಸೆಸ್‌ನ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ಹೊರೆ ಹೊರಿಸುತ್ತಿದ್ದಾರೆ ಹಾಗೂ ಅದಲ್ಲದೇ ಈಗ ನಮ್ಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿರಿಯ ನಾಗರಿಕರಿಗೆ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯ ಸರಕಾರದ ಹಂಚಿಕೆಗೆ ಒಪ್ಪಿಗೆ ನೀಡದೆ ಹಿರಿಯರ ಕ್ಷೇಮಾಭಿವೃದ್ಧಿಗೆ ಪೂರಕವಾದ ಈ ಯೋಜನೆಯಿಂದ ವಂಚಿತರಾಗಿಸುತ್ತಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಪ್ರಕಟಣೆಯಲ್ಲಿ ದೂರಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಅತಿರೇಕ ದಿನದಿಂದ ದಿನಕ್ಕೆ ಏರುತ್ತಿದ್ದು ಕ್ಷುಲ್ಲಕ ರಾಜಕಾರಣಕ್ಕೆ ಜನ ಬೆಲೆ ಕಟ್ಟುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿರುವುದು ದುರದೃಷ್ಟಕರ. ಅಮೂಲ್ಯವಾದ ಮಾನವ ಜೀವಗಳನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದನ್ನು ಬಿಟ್ಟು ತುರ್ತಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ನಾವು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದು ಕ್ಯಾ. ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.