
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ
Saturday, January 18, 2025
ಮಂಗಳೂರು: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಂಜೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿಯದೆ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು.
ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.
ಪತ್ತೆ ಹಚ್ಚಲು ಸೂಚನೆ..:
ಕೋಟೆಕಾರು ಬ್ಯಾಂಕ್ ದರೋಡೆಗೆ ಸಂಬಂಧಿಸಿದಂತೆ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.