ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆ

ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆ


ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಭಾಗವಾಗಿ ನಗರದ ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ರಮೇಶ್ ಕಂಡೆಟ್ಟು ಹಾಗೂ ಮಂಡಲದ ವಿವಿಧ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಂಡರು. 


ನಂತರ ಎಲ್ಲರನ್ನು ಅಭಿನಂದಿಸಿದ ಶಾಸಕ ಡಿ.ವೇದವಾಸ್ ಕಾಮತ್ ಅವರು ಬರುವ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಸಮರ್ಥವಾಗಿ ಬಲಿಷ್ಠವಾಗಿ ಕಟ್ಟೋಣ, ಪ್ರಧಾನಿ ನರೇಂದ್ರ ಮೋದಿಯವರ ಆಶಯಕ್ಕೆ ತಕ್ಕಂತೆ ನಾಡನ್ನು ಕಟ್ಟೋಣ. ಆ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರವಿರಲಿ ಎಂದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರುಗಳಾದ ಎನ್.ರವಿಕುಮಾರ್, ಕಿಶೋರ್ ಕುಮಾರ್, ಕ್ಯಾ. ಗಣೇಶ್ ಕಾರ್ಣಿಕ್, ಯತೀಶ್ ಅರ್ವರ್ ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article