
ಹಿರಿಯ ಪತ್ರಕರ್ತ, ಹರೇಕಳ ಹಾಜಬ್ಬರನ್ನು ಸಮಾಜಕ್ಕೆ ಪರಿಚಯಿಸಿದ ಗುರುವಪ್ಪ ಎನ್.ಟಿ. ಬಾಳೆಪುಣಿ ಇನ್ನಿಲ್ಲ
Sunday, January 26, 2025
ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಬಾಳೆಪುಣಿಯ ಸ್ವಗೃಹದಲ್ಲಿ ಇಂದು ಮಧ್ಯಾಹ್ನ ನಿಧನರಾದರು.
ಅವರು ಸಂಯುಕ್ತ ಕರ್ನಾಟಕ, ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಯಲ್ಲೂ ಕೆಲಸ ಮಾಡಿದ್ದರು. ಸದ್ಯ ಅವರು ಹೊಸ ದಿಗಂತ ಪತ್ರಿಕೆಯಲ್ಲಿ 26 ವರ್ಷಗಳಿಂದ ವರದಿಗಾರರಾಗಿದ್ದರು.
ಕಿತ್ತಳೆ ಮಾರಿ ಶಾಲೆ ಕಟ್ಟಿದ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದವರು. ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗೆ ಗುರುವಪ್ಪ ಬಾಳೆಪುಣಿ ಪುರಸ್ಕೃತರಾಗಿದ್ದಾರೆ