
‘ಐಕಳಬಾವ ಕಂಬಳ’ ಆಮಂತ್ರಣ ಪತ್ರಿಕೆ ಬಿಡುಗಡೆ
Saturday, January 4, 2025
ಮಂಗಳೂರು: ಇತಿಹಾಸ ಪ್ರಸಿದ್ಧ ಸಂಪ್ರದಾಯಬದ್ಧವಾದ ಹಾಗೂ ಪುರಾತನ ಹಿನ್ನೆಲೆಯುಳ್ಳ ದೈವಾರಾಧನೆಯೊಂದಿಗೆ ವಿಜೃಂಭಣೆಯಲ್ಲಿ ನಡೆಯುವ ‘ಐಕಳಬಾವ ಕಾಂತಾಬಾರೆ-ಬೂದಾಬಾರೆ ಜೋಡುಕೆರೆ ಕಂಬಳ ಹಾಗೂ ಐಕಳೋತ್ಸವ-2025 ಫೆಬ್ರವರಿ 1ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಶುಕ್ರವಾರ ಬಿಡುಗಡೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಹಾಗೂ ಕಂಬಳೋತ್ಸವ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಕಂಬಳ ಶಿಸ್ತು ಸಮಿತಿ ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವಾದಿರಾಜ ಎಂ. ಶೆಟ್ಟಿ ಹಾಗೂ ಸದಾಶಿವ ಉಳ್ಳಾಲ್, ವಕೀಲರಾದ ರಕ್ಷಿತ್ ಕುಮಾರ್ ಉಪಸ್ಥಿತರಿದ್ದರು.