ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಪ್ರಭಾಕರ ಶಿಶಿಲ ಸರ್ವಾಧ್ಯಕ್ಷರಾಗಿ ಆಯ್ಕೆ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಪ್ರಭಾಕರ ಶಿಶಿಲ ಸರ್ವಾಧ್ಯಕ್ಷರಾಗಿ ಆಯ್ಕೆ


ಮಂಗಳೂರು: ಮಂಗಳುರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಫೆಬ್ರವರಿ 21 ಮತ್ತು 22 ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ. ಪ್ರಭಾಕರ ಶಿಶಿಲ ಕುರಿತು:

ಸುಳ್ಯ ತಾಲೂಕಿನ ಕೂತುಕುಂಜ ಕಜೆ ಎಂಬಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿ ಬದುಕುತ್ತಿರುವ ಡಾ. ಪ್ರಭಾಕರ ಶಿಶಿಲರು ಕನ್ನಡದ ವಿಶಿಷ್ಟ ಪ್ರತಿಭೆ ಹಾಗೂ ಶ್ರೇಷ್ಠ ಸಾಹಿತಿ.

ಕನ್ನಡದಲ್ಲಿ 10 ಕಾದಂಬರಿ, 8 ಕಥಾ ಸಂಕಲನ 5 ಪ್ರವಾಸ ಕಥನ ಸೇರಿ ಒಟ್ಟು 54 ಸೃಜನಶೀಲ ಕೃತಿಗಳನ್ನು ಹಾಗೂ 165 ಅರ್ಥಶಾಸ್ತ್ರ ವಿಚಾರ ಸಾಹಿತ್ಯ ಕೃತಿಗಳನ್ನು ಹಾಗೂ ಆಂಗ್ಲ ಭಾಷೆಯಲ್ಲಿ 10 ಅರ್ಥಶಾಸ್ತ್ರ ಕೃತಿಗಳ ರಚಸಿದ್ದಾರೆ. ಕನ್ನಡ ದಿನ ಪತ್ರಿಕೆಗಳು ಹಾಗೂ ನಿಯತಾಕಾಲಿಕಗಳಲ್ಲಿ 250ಕ್ಕೂ ಮಿಕ್ಕಿ ಲೇಖನ, ಕತೆ, ವಿಡಂಬನೆ ಇತ್ಯಾದಿಗಳ ಪ್ರಕಟಿಸಿರುತ್ತಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಶತಮಾನದ ಕವಿಗಳು ಕೃತಿಯಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಕವಿತೆಗಳು ಮಂಗಳೂರು ಆಕಾಶವಾಣಿಯಿಂದ ಪ್ರಸಾರವಾಗಿದೆ. ಅನೇಕ ಲಾವಣಿ ಮತ್ತು ಗೀಗೀ ಪದ ರಚಿಸಿದ್ದಾರೆ.

ಇವರು ಬರೆದ ಪುಂಸ್ತ್ರೀ ಕೃತಿ ಸಂಸ್ಕೃತ, ಹಿಂದಿ, ಮಲೆಯಾಳಂ, ತೆಲುಗು, ತಮಿಳು, ತುಳು, ಕೊಂಕಣಿ, ಮರಾಠಿ, ಅರೆಭಾಷೆ, ಕೊಡವ, ಗುಜರಾಥಿ, ಬೆಂಗಾಲಿ, ಪಂಜಾಬಿ, ಇಂಗ್ಲೀಷ್ ಭಾಷೆಗಳಿಗೆ ಅನುವಾದಗೊಂಡು ಜನಮನ್ನಣೆ ಪಡೆದಿದೆ. ಮತ್ಸ್ಯಗಂಧಿ, ಕಪಿಲಳ್ಳಿಯ ಕತೆಗಳು, ಮೂಡಣದ ಕೆಂಪುಕಿರಣ, ಇರುವುದೆಲ್ಲವ ಬಿಟ್ಟು ಕೃತಿಗಳೂ ಅನ್ಯ ಭಾಷೆಗೆ ಅನುವಾದಗೊಂಡಿವೆ. ಯಕ್ಷಗಾನ ಹಾಗೂ ರಂಗಭೂಮಿಗೂ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅನೇಕ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ಗುರುತಿಸಿಕೊಂಡು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡು ಜನರ ಪ್ರೀತಿ ಸಂಪಾದಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಅನೇಕ ಪ್ರಶಸ್ತಿಗಳು ಅರಸಿ ಬಂದಿವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article