‘ಶಿಕ್ಷಣ ಸಂಸ್ಥೆಗಳ ಬಳಿ ಸಿಗರೇಟ್ ಮಾರಿದರೆ ಅಂಗಡಿ ಲೈಸನ್ಸ್ ರದ್ದು’: ಡಾ. ಜಿ. ಸಂತೋಷ್ ಕುಮಾರ್ ಸೂಚನೆ

‘ಶಿಕ್ಷಣ ಸಂಸ್ಥೆಗಳ ಬಳಿ ಸಿಗರೇಟ್ ಮಾರಿದರೆ ಅಂಗಡಿ ಲೈಸನ್ಸ್ ರದ್ದು’: ಡಾ. ಜಿ. ಸಂತೋಷ್ ಕುಮಾರ್ ಸೂಚನೆ


ಮಂಗಳೂರು: ಶಾಲಾ ಕಾಲೇಜುಗಳ 100 ಅಂತರದಲ್ಲಿ ಸಿಗರೇಟು ಸೇರಿದಂತೆ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳ ಪರವಾನಿಗೆ ರದ್ದು ಮಾಡಲು ಎಲ್ಲಾ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮತ್ತು ಕಚೇರಿ ಆವರಣದಲ್ಲಿ ಧೂಮಪಾನ ಮತ್ತು ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಸರಕಾರಿ ಕಚೇರಿಗಳು ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ತಿಳಿಸಿದರು.

ಇತ್ತೀಚೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿರುವ ವಿದ್ಯಮಾನ ಕಂಡು ಬರುತ್ತಿದ್ದು, ಈ ಬಗ್ಗೆ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳ ನಡವಳಿಕೆಗಳನ್ನು ಗಮನಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್, ಎ.ಸಿ.ಪಿ. ಗೀತಾ ಕುಲಕರ್ಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article