
ಇ ಖಜಾನೆ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಚಾಲನೆ
Friday, January 17, 2025
ಮಂಗಳೂರು: ಮಂಗಳೂರಿನ ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಇ ಖಜಾನೆ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಚಾಲನೆ ನೀಡಿದರು.
ಸಾರ್ವಜನಿಕರ ಭೂ ದಾಖಲೆಗಳಿಗೆ ಭದ್ರತೆ ಒದಗಿಸಲು ಸರ್ವೇ ಮತ್ತು ಭೂ ನೋಂದಣಿ ದಾಖಲೆಗಳ ಡಿಜಿಟಲೀಕರಣ ಕೈಗೊಳ್ಳಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಒಂದು ತಾಲೂಕಿನಲ್ಲಿ ಯೋಜನೆ ಜಾರಿಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳು ಸೇರಿದಂತೆ ರಾಜ್ಯಾದ್ಯಂತ ಯೋಜನೆ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.