ಬೆಳಗಾವಿ ಕಾಂಗ್ರೆಸ್ ಅಧಿವೇಶನ ರಾಜ್ಯದ ಜನತೆಯಲ್ಲಿ ಸ್ವಾತಂತ್ರ್ಯ ಹೋರಾಟದ ಮನೋಭಾವನೆ ಹೆಚ್ಚಿಸಿತು: ಪ್ರೊ. ಗಣಪತಿ ಗೌಡ

ಬೆಳಗಾವಿ ಕಾಂಗ್ರೆಸ್ ಅಧಿವೇಶನ ರಾಜ್ಯದ ಜನತೆಯಲ್ಲಿ ಸ್ವಾತಂತ್ರ್ಯ ಹೋರಾಟದ ಮನೋಭಾವನೆ ಹೆಚ್ಚಿಸಿತು: ಪ್ರೊ. ಗಣಪತಿ ಗೌಡ


ಮಂಗಳೂರು: ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಕರ್ನಾಟಕದ ಜನರಲ್ಲಿ ಏಕೀಕರಣಕ್ಕೆ ಸ್ಪೂರ್ತಿಯನ್ನು ನೀಡುವುದರ ಜೊತೆಗೆ, ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಮನೋಭಾವನೆಯನ್ನು ಹೆಚ್ಚಿಸಿತ್ತು. ಮಾತ್ರವಲ್ಲದೆ, ಸ್ವದೇಶಿ ಆಂದೋಲನ, ಅಸ್ಪೃಶ್ಯತೆ ನಿವಾರಣೆ, ಖಾದಿ ಬಳಕೆ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಪ್ರಚಾರಗೊಳಿಸಿತ್ತು ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಹೇಳಿದರು.

ಅವರು ಇಂದು ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದರ ಐ.ಕ್ಯೂ.ಎ.ಸಿ, ಇತಿಹಾಸ ವಿಭಾಗ ಹಾಗೂ ಮಾನವಿಕ ಸಂಘದ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಅಂಗವಾಗಿ ನಡೆಯುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು ಸ್ವಾತಂತ್ರ್ಯ ಹೋರಾಟದಲ್ಲಿ ನಡೆದ ತ್ಯಾಗ ಬಲಿದಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ದೇಶದ ಇತಿಹಾಸದ ಬಗ್ಗೆ ಹೆಮ್ಮೆ ಹಾಗೂ ಗೌರವಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. 


ಕಾರ್ಯಕ್ರಮದ ಸಂಯೋಜಕಿ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥೆ ಜ್ಯೋತಿ ಪಿ. ಪ್ರಾಸ್ತವಿಕ ನುಡಿಗಳನ್ನಾಡಿದರು.

ಕಾಲೇಜಿನ ಐ.ಕ್ಯೂ.ಎ.ಸಿ. ಸಹ ಸಂಚಾಲಕಿ ಡಾ. ಜ್ಯೋತಿಪ್ರಿಯ, ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಕೃಷ್ಣಪ್ರಭ ಉಪಸ್ಥಿತರಿದ್ದರು.

ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಾದ ನವಿತಾ ಸ್ವಾಗತಿಸಿದರು ನಿಶಾ ಕುಮಾರಿ ವಂದಿಸಿ, ಮೊಹಮ್ಮದ್ ಆಶಿಕ್ ಕಾರ್ಯಕ್ರಮ ನಿರ್ವಹಿಸಿದರು.

ಉದ್ಘಾಟನೆಯ ನಂತರ ವಿದ್ಯಾರ್ಥಿಗಳಿಗೆ ಬೆಳಗಾವಿ ಅಧಿವೇಶನದ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article