ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಪದಕ ತನ್ನಿ: ಸಿಎಂ

ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಪದಕ ತನ್ನಿ: ಸಿಎಂ

ಕರ್ನಾಟಕ ಕ್ರೀಡಾಕೂಟ 2025ಕ್ಕೆ ಚಾಲನೆ


ಮಂಗಳೂರು: ಇಂದಿನಿಂದ ನಡೆಯುವ ಕರ್ನಾಟಕ ಕ್ರೀಡಾಕೂಟ 2025ಕ್ಕೆ ಇಂದು ಸಂಜೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. 

ಕ್ರೀಡಾಕೂಟ ಆರಂಭಗೊಂಡಿದೆ ಎಂದು ಘೋಷಿಸಿದ ಮುಖ್ಯಮಂತ್ರಿಗಳು,  ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಪದಕ ತನ್ನಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್, ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಪುನರುಚ್ಚರಿಸಿದರು. 

ಮುಂದಿನ ಬಜೆಟ್‌ನಲ್ಲಿ ಮಂಗಳೂರು ಮತ್ತು ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ತಲಾ 3 ಕೋಟಿ ರೂ. ನಿಗದಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು. 

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ.2 ರಷ್ಟು ಉದ್ಯೋಗಗಳು ಕ್ರೀಡಾಟುಗಳಿಗೆ ಮೀಸಲು ಇಡಲಾಗುವುದು. ಜೊತೆಗೆ ಪೊಲೀಸ್, ಅರಣ್ಯ ಇಲಾಖೆ ಸೇರಿ ಸಮವಸ್ತ್ರ ಧರಿಸುವ ಹುದ್ದೆಗಳಿಗೆ ಶೇ.3 ರಷ್ಟು ಉದ್ಯೋಗ ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದರು. 

ಒಲಂಪಿಕ್ ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂ. ಕೊಡ್ತೀವಿ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.

ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಕ್ರೀಡಾ ಧ್ವಜಾರೋಹಣಗೈದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಶೋಕ್ ಕುಮಾರ್ ರೈ, ಭಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ. ಸೋಜಾ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಡಾ. ಕೆ. ಗೋವಿಂದ ರಾಜ್, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಹಿಲನ್, ಡಾ. ಕೆ. ವಿದ್ಯಾಕುಮಾರಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ದ. ಕ. ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್, ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ., ಅಮಿತ್ ಸಿಂಗ್ ಮೊದಲಾದವರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್. ಚೇತನ್ ಸ್ವಾಗತಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article