ನಾಳೆ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಿರ್ಮಾಣಗೊಂಡಿರುವ ನೂತನ ಮೇಜರ್ ಧ್ಯಾನ್ ಚಂದ್ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ

ನಾಳೆ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಿರ್ಮಾಣಗೊಂಡಿರುವ ನೂತನ ಮೇಜರ್ ಧ್ಯಾನ್ ಚಂದ್ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ


ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನ.25 ರಂದು 3000 ಚದರ ಅಡಿಯ ಮೇಜರ್ ಧ್ಯಾನ್ ಚಂದ್ ಒಳಾಂಗಣ ಕ್ರೀಡಾ ಸಂಕೀರ್ಣವನ್ನು ದಕ್ಷಿಣ ಕನ್ನಡ ಸಂಸತ್ ಸದಸ್ಯ ಕ್ಯಾ. ಬ್ರಿಜೇಶ್ ಚೌಟರವರು ಉದ್ಘಾಟನೆ ಮಾಡಲಿದ್ದಾರೆ. ಈ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಕೋರ್ಟ್, ಟೇಬಲ್ ಟೆನ್ನಿಸ್, ಕ್ಯಾರಂ, ಚೆಸ್ ಮುಂತಾದ ಒಳಾಂಗಣ ಕ್ರೀಡೆಗಳನ್ನಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಳ್ಳಲಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್ ಅವರು ವಹಿಸಲಿದ್ದಾರೆ. ಪ್ರಧಾನ ಸಲಹೆಗಾರರಾದ ರಮೇಶ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article