
ಸಮುದ್ರ ತೀರದಲ್ಲಿ ಮೃತದೇಹ ಪತ್ತೆ
Saturday, January 4, 2025
ಮಂಗಳೂರು: ಚಿತ್ರಾಪುರ ಕುಳಾಯಿ ಸಮುದ್ರ ತೀರದಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರ ಶವ ಶುಕ್ರವಾರ ಸಂಜೆ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಮುಹಮ್ಮದ್ ಖುರೇಶಿ (35) ಎಂದು ಗುರುತಿಸಲಾಗಿದೆ.
ಮೃತದೇಹದ ಪ್ಯಾಂಟಿನ ಜೇಬಿನಲ್ಲಿ ಪತ್ತೆಯಾದ ಕೆಲವು ದಾಖಲೆಗಳ ಆಧಾರದಲ್ಲಿ ಮೃತದೇಹದ ಗುರುತು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಮುದ್ರದಲ್ಲಿ ಈಜುವಾಗ ಅಥವಾ ಯಾವುದೋ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.