ಕನಾ೯ಟಕ ಕ್ರೀಡಾಕೂಟ ಯಶಸ್ಸಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ಕರೆ

ಕನಾ೯ಟಕ ಕ್ರೀಡಾಕೂಟ ಯಶಸ್ಸಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ಕರೆ


ಮಂಗಳೂರು: ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ-2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

347 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಖೋಖೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್, ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿ.ಪಂ. ಸಿಇಒ ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್. ಉಮ್ಮರ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article