
ನೀರಿನಲ್ಲಿ ಮುಳುಗಿ ಸಾಯುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತದೆ: ಡಾ. ದೇವನ್ ಪಿ.ಪಿ.
Friday, January 17, 2025
ಮಂಗಳೂರು: ಇತ್ತೀಚಿನ ವರ್ಷಗಳಲ್ಲಿ ನೀರಿನಲ್ಲಿ ಮುಳುಗಿ ಸಂಭವಿಸುವ ಸಾವುಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ನೀರಿನಲ್ಲಿ ಮುಳುಗಿ 10ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಮುಂದುವರಿದ ದೇಶಗಳಲ್ಲಿ ಈಗಾಗಲೇ ಇರುವಂತೆ ಈಜುವವರು ಗಣಮಟ್ಟದ (150 ನ್ಯೂಟನ್ ರೇಟಿಂಗ್) ಲೈಫ್ ಜಾಕೆಟ್ ಬಳಸಬೇಕು. ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ ಎಂದು ಎ.ಜೆ. ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ. ದೇವನ್ ಪಿ.ಪಿ. ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಜಾಗರೂಕತಾ ಕ್ರಮವಾಗಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಸಂದರ್ಭ ತಲೆಗೆ ಹೆಲ್ಮೆಟ್ ಧರಿಸಿದಂತೆ, ಕಾರಿನಲ್ಲಿ ಪ್ರಯಾಣಿಸುವ ಸಂದರ್ಭ ಸೀಟ್ ಬೆಲ್ಟ್ ಧರಿಸಿದ ಹಾಗೆ ನೀರಿನಲ್ಲಿ ಈಜುವ ಸಂದರ್ಭ ಕಡ್ಡಾಯವಾಗಿ ಗುಣಮಟ್ಟದ ಲೈಫ್ ಜಾಕೆಟ್ ಬಳಕೆ ಕಡ್ಡಾಯವಾಗಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿ ಪೌಲೋಸ್ ಉಪಸ್ಥಿತರಿದ್ದರು.