
ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ರಂಗಕ್ಕೆ ಹೊಸ ಸ್ವರೂಪ ನೀಡಿ ಅಭಿನವ ಮೊಳಹಳ್ಳಿ ಎಂದೇ ಖ್ಯಾತರಾಗಿರುವ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಎಸ್‌ಸಿಡಿಸಿಸಿ ಬ್ಯಾಂಕ್‌ನ್ನು ರಾಷ್ಟ್ರದಲ್ಲಿ ಗುರುತಿಸುವಂತೆ ಮಾಡಿದವರು. ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಂದ ಪುರಸ್ಕೃತ ಆಗಲು ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವ ಕಾರಣವಾಗಿದೆ.
ರಾಜೇಂದ್ರ ಕುಮಾರ್ ಅವರ ಸೇವೆ ಎಸ್‌ಸಿಡಿಸಿಸಿ ಬ್ಯಾಂಕಿಗೆ ಮಾತ್ರ ಸಿಮೀತವಾಗಿರದೆ ವಿವಿಧ ರೀತಿಯ ಸಹಕಾರ ಸಂಘಗಳ ಅಭಿವೃದ್ಧಿಯಲ್ಲೂ ಪೂರಕವಾಗಿ ಅವರು ರಾಜ್ಯ ಮಟ್ಟದಲ್ಲೇ ಸಮರ್ಥ ನಾಯಕರೆನಿಸಿ ಕೊಂಡವರು. ಅದರಲ್ಲೂ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ನೌಕರರ ಏಕೈಕ ಸಹಕಾರಿ ಸಂಸ್ಥೆ ‘ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಬಗ್ಗೆ ಅವರು ವಿಶೇಷ ಕಾಳಜಿಯನ್ನು ಹೊಂದಿದ್ದರು.
ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಆಯ್ಕೆ ಕೂಡ ಅವರ ಮಾರ್ಗದರ್ಶನದಲ್ಲೇ ಅವಿರೋಧವಾಗಿಯೇ ನಡೆದಿದೆ. ಹಾಗಾಗಿ ಆಯ್ಕೆಗೊಂಡ ಆಡಳಿತ ಮಂಡಳಿ ಸದಸ್ಯರೆಲ್ಲರೂ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಶನಿವಾರ ಗೌರವಪೂರ್ವಕವಾಗಿ ಅಭಿನಂದಿಸಿದರು.
ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ, ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್, ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ., ವಿಶ್ವೇಶ್ವರ ಐತಾಳ್ ಎಸ್, ಜಯಪ್ರಕಾಶ್ ರೈ ಸಿ., ವಿಶ್ವನಾಥ್ ಕೆ.ಟಿ., ವಿಶ್ವನಾಥ್ ಎನ್. ಅಮೀನ್, ಶಿವಾನಂದ ಪಿ, ಗಿರಿಧರ್ ಕೆ., ಚಂದ್ರಕಲಾ ಕೆ., ಗೀತಾಕ್ಷಿ, ಕಿರಣ್ ಕುಮಾರ್ ಶೆಟ್ಟಿ, ನಿಶಿತಾ ಜಯರಾಮ್, ಮೋಹನ್ ಎಸ್., ಪ್ರೇಮರಾಜ್ ಭಂಡಾರಿ, ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಸತೀಶ್ ಪೂಜಾರಿ ಹಾಗೂ ಉದ್ಯಮಿ ಜಯಪ್ರಕಾಶ್ ತುಂಬೆ, ಸಂಘದ ಮಾಜಿ ಗೌರವ ಕಾರ್ಯದರ್ಶಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.