ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ ವಾಟ್ಸಾಪ್ ನಲ್ಲಿ ಪೋಸ್ಟ್: ಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ದೂರು

ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ ವಾಟ್ಸಾಪ್ ನಲ್ಲಿ ಪೋಸ್ಟ್: ಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ದೂರು


ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ ವಾಟ್ಸಾಪ್ ನಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವ ನಿಯೋಗ ಗುರುವಾರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ನೀಡಿದೆ.

ನಗರದ ಶಕ್ತಿನಗರ ಕೊಡಿಕಂಬ ನಿವಾಸಿ ಅಶೋಕ್ ನಾಯಕ್ ಎಂಬಾತ ‘KDAGB DK Zilla Sangha’ ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ ಪೋಸ್ಟ್ ಮಾಡಿದ್ದು, ದಲಿತ ಸಮುದಾಯಕ್ಕೆ ತೀರನೋವುಂಟಾಗಿದೆ. ಈತನ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. 

ನಿಯೋಗದಲ್ಲಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್., ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ದಿನೇಶ್ ಮೂಳೂರು, ಕೆಪಿಸಿಸಿ ಸದಸ್ಯೆ ಕೆ. ಅಪ್ಪಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ. ಹೊನ್ನಯ್ಯ, ಮುಖಂಡರಾದ ದುರ್ಗಾ ಪ್ರಸಾದ್, ಕವಿತಾ ವಾಸು ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article