ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಾಗಿ ಆಯ್ಕೆಗೊಂಡ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಅಭಿನಂದನೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಾಗಿ ಆಯ್ಕೆಗೊಂಡ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಅಭಿನಂದನೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ನ ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಮಹೇಶ್ ಶೆಟ್ಟಿ ಎಂ., ರಾಜೇಶ್ ರಾವ್ ಹಾಗೂ ಎಸ್.ಎನ್. ಮನ್ಮಥ ಇವರು ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಇವರನ್ನು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಭಿನಂದಿಸಿದರು.

ಬೆಳ್ವಾಯಿ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಭಾಸ್ಕರ್ ಎಸ್. ಕೋಟ್ಯಾನ್, ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ಎಂ., ಇನ್ನಂಜೆ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜೇಶ್ ರಾವ್, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಎನ್. ಮನ್ಮಥ ಇವರು ಆಯ್ಕೆಗೊಂಡಿದ್ದು, ಇವರೆಲ್ಲರೂ ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿದ್ದು, ಇವರನ್ನು ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಭಿನಂದಿಸಿ, ಶುಭ ಕೋರಿದರು.

ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ್, ಕೆ. ಜೈರಾಜ್ ಬಿ. ರೈ, ಹರಿಶ್ಚಂದ್ರ, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್., ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article