
ಜ.12 ಡಾ. ಎಂ. ವೀರಪ್ಪ ಮೊಯ್ಲಿ ಅವರ ವಿಶ್ವ ಸಂಸ್ಕೃತಿಯ ಮಾಹಾಯಾನ ಕೃತಿ ಬಿಡುಗಡೆ
Friday, January 10, 2025
ಮೂಡುಬಿದಿರೆ: ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಯವರು ರಚಿಸಿದ ವಿಶ್ವಸಂಸ್ಕೃತಿಯ ಮಹಾಯಾನ ಸಂಪುಟ 2 ಗದ್ಯ ಮಹಾಕಾವ್ಯ ಇದರ ಬಿಡುಗಡೆಯು ಜ.12 ರಂದು ಬೆಳಿಗ್ಗೆ 11ಗಂಟೆಗೆ ವಿದ್ಯಾಗಿರಿ ಯ ಡಾ. ಎ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾಜಿ ಸಚಿವ ಅಭಯಚಂದ್ರ ಜೈನ್ ಪತ್ರಿಕಾಗೋಷ್ಠಿ ಯಲ್ಲಿ ಕುರಿತು ಮಾಹಿತಿ ನೀಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಸಪ್ನ ಬುಕ್ ಹೌಸ್ ವತಿಯಿಂದ ನಡೆಯುವ ಈ ಕಾರ್ಯಕ್ರಮ ದಲ್ಲಿ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ ಸಿ. ನಾಗಣ್ಣ ಗ್ರಂಥ ಬಿಡುಗಡೆ ಮಾಡಲಿದ್ದು ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ. ಬಿ.ಎ ವಿವೇಕ ರೈ ಆಶಯ ನುಡಿಗಳನ್ನಾಡಲಿದ್ದಾರೆ.
ಖ್ಯಾತ ಸಾಹಿತಿ ಡಾ. ಕಬ್ಬಿನಾಲೆ ವಸಂತ ಭಾರದ್ರಾಜ ಗ್ರಂಥದ ಕುರಿತು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ತ ಜೈನ್ ಭಾಗವಹಿಸಲಿದ್ದಾರೆ.
ಈ ಕೃತಿಯು ವಿಶ್ವದ 17 ಸಂಸ್ಕೃತಿಯನ್ನು ಪರಿಚಯಿಸಲಿದೆ. ಪತ್ರಿಕಾಗೋಷ್ಠಿ ಯಲ್ಲಿ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.