ಮೂಡುಬಿದಿರೆ: 22ನೇ ವಷ೯ದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: 22ನೇ ವಷ೯ದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ


ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ 22ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಶನಿವಾರ ಆರಂಭಗೊಂಡಿತು.

ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅಲಂಗಾರು ಚರ್ಚಿನ ಧರ್ಮಗುರು ರೇಫಾ ಮೆಲಸ್ ನೊರೊನ್ಹ ಉದ್ಯಮಿ ಸುಧೀರ್ ಹೆಗ್ಡೆ ಕಂಬಳ ಕರೆಗೆ ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದವನ್ನು ಸಂಪ್ರೋಕ್ಷಿಸಿ ಕಂಬಳಕ್ಕೆ ಸಾಂಪ್ರದಾಯಿಕ ಚಾಲನೆ ನೀಡಿದರು.

ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ದೀಪ ಬೆಳಗಿಸಿ ಸಭಾ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜನಪದ ಕ್ರೀಡೆ ಕಂಬಳವು ಸಾಂಸ್ಕೃತಿಕ ಪರಂಪರೆ, ಭಕ್ತಿಯಿಂದ ಆಚೆ ಆಚರಿಸಲ್ಪಡುವ ಕ್ರೀಡೆಯಾಗಿದ್ದು ಹಲವು ತಲೆಮಾರುಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ. ಮೂಲತಃ ಬೇರನ್ನು ಉಳಿಸಿಕೊಂಡು ಕಾಲಕಾಲಕ್ಕೆ ಪರಿವರ್ತನೆಗೊಂಡು ಬಂದಿರುವ ಈ ಕ್ರೀಡೆಯು ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತದೆ ಎಂದು ಹೇಳಿದರು.


ಆಧ್ಯಾತ್ಮಿಕ ಗುರು ಚಂದ್ರಶೇಖರ್ ಸ್ವಾಮೀಜಿ ಅಬ್ಬಕ್ಕ ರಾಣಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. 

ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಕೆಎಂಎಫ್ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್, ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಹಿಂ.ಜಾ.ವೇ. ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ, ವೆಂಕಟರಮಣ ಮತ್ತು ಹನುಮಂತ ದೇವಸ್ಥಾನದ ಆಡಳಿತ ಮೊಕ್ತೇಸರ ಉಮೇಶ್ ಜಿ. ಪೈ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಉಳಿಯ ಬಾಲಕೃಷ್ಣ ಆಚಾರ್ಯ ಉದ್ಯಮಿಗಳಾದ ಕೆ. ಶ್ರೀಪತಿ ಭಟ್, ತಿಮ್ಮಯ್ಯ ಶೆಟ್ಟಿ, ನಂದಕುಮಾರ್ ಕುಡ್ವ, ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಮೂಡಾ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಮೂಡುಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ ರೋಟರಿ ಕ್ಲಬ್ ಅಧ್ಯಕ್ಷ ರವಿಪ್ರಸಾದ್ ಉಪಾಧ್ಯಾಯ, ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಪೂರ್ಣಚಂದ್ರ ಜೈನ್ ಲಯನ್ಸ್ ಕ್ಲಬ್ ಅಧ್ಯಕ್ಷ ಬೊನವೆಂಚರ್ ಮಿನೇಜಸ್ ಜೇಸಿ ಅಧ್ಯಕ್ಷೆ ವರ್ಷಾ ಕಾಮತ್, ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಶರತ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.  

ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಕೋಶಾಧಿಕಾರಿ ಭಾಸ್ಕರ ಕೋಟ್ಯಾನ್ ಉಪಾಧ್ಯಕ್ಷ ಸುರೇಶ್ ಕೆ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್ ಸ್ವಾಗತಿಸಿ, ಕಾರ್ಯದರ್ಶಿ ಗುಣಪಾಲ ಕಡಂಬ ಕಾರ್ಯಕ್ರಮ ನಿರೂಪಿಸಿದರು.

ಕಂಬಳ ಆರಂಭಕ್ಕೂ ಮುನ್ನ ಸ್ಥಳೀಯ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ನಡೆಸಿ ಕಂಬಳದ ಕೋಣಗಳನ್ನು ಮೆರವಣಿಗೆ ಮೂಲಕ ಕಂಬಳ ಕರೆಗೆ ಬರಮಾಡಿಕೊಳ್ಳಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article