
ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ
Monday, January 20, 2025
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರಿಯಾಡಿ ಹಾಗೂ ಹೌದಾಲ್ ಗಳಲ್ಲಿಯ ಸ್ರ್ತೀಶಕ್ತಿ ಗುಂಪುಗಳ ಸದಸ್ಯರಿಗೆ ಜ.20 ರಂದು ಸರ್ಕಾರದಿಂದ ಗ್ರಾಮೀಣ ಪ್ರದೇಶದ ಜನರಿಗೆ ದೊರಕುವ ವಿವಿಧ ಸೌಲಭ್ಯಗಳ ಮಾಹಿತಿಯನ್ನು ನೀಡಲಾಯಿತು.
ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿಯನ್ನು ನೀಡಿದರು.
ಹೌದಾಲ್ ಅಂಗನವಾಡಿಯಲ್ಲಿ ಆಶಾ ಕಾರ್ಯಕರ್ತೆ ವಿದ್ಯಾ, ಅಂಗನವಾಡಿ ಟೀಚರ್ ಪೂರ್ಣಿಮಾ ಉಪಸ್ಥಿತರಿದ್ದರು. ಮರಿಯಾಡಿಯಲ್ಲಿ ಸ್ತ್ರೀ ಶಕ್ತಿ ಗುಂಪಿನ ಅಧ್ಯಕ್ಷೆ ಪ್ರತಿಭಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ವಿನೋದ ವಂದಿಸಿದರು.