ದಕ್ಷಿಣ ವಲಯ ವಿಶ್ವವಿದ್ಯಾಲಯ: ಮಂಗಳೂರು ವಿ.ವಿ. ತಂಡದಲ್ಲಿ ಆಳ್ವಾಸ್ ಆಟಗಾರರು ಅಧಿಕ, ಖೋಖೋ: ಪುರುಷರು ಪ್ರಥಮ, ಮಹಿಳೆಯರು ತೃತೀಯ

ದಕ್ಷಿಣ ವಲಯ ವಿಶ್ವವಿದ್ಯಾಲಯ: ಮಂಗಳೂರು ವಿ.ವಿ. ತಂಡದಲ್ಲಿ ಆಳ್ವಾಸ್ ಆಟಗಾರರು ಅಧಿಕ, ಖೋಖೋ: ಪುರುಷರು ಪ್ರಥಮ, ಮಹಿಳೆಯರು ತೃತೀಯ


ಮೂಡುಬಿದಿರೆ: ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಗಳು ಅಧಿಕ ಸಂಖ್ಯೆಯಲ್ಲಿ ಪ್ರತಿನಿಧಿಸಿದ ಮಂಗಳೂರು ವಿಶ್ವವಿದ್ಯಾಲಯದ ತಂಡಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಖೋ-ಖೋ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಪ್ರಥಮ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿವೆ.

ತಮಿಳುನಾಡಿನ ತಿರುವನೂರಿನ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಡಿ.27 ರಿಂದ 31 ರವರೆಗೆ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಪ್ರಥಮ ಸ್ಥಾನ ಪಡೆದಿದೆ.

ಈ ನಾಲ್ಕು ತಂಡಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದಿವೆ. ಫೈನಲ್ ಪಂದ್ಯದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯವನ್ನು 9-17ರಿಂದ ಮಣಿಸಿದ ಮಂಗಳೂರು ವಿಶ್ವವಿದ್ಯಾಲಯ ಚಾಂಪಿಯನ್ ಆಯಿತು.


ಮಹಿಳೆಯರ ವಿಭಾಗ: ಕೇರಳದ ಕ್ಯಾಲಿಕಟ್ವಿ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ವಿಶ್ವವಿದ್ಯಾನಿಲಯಗಳ ಮಹಿಳೆಯರ ಖೋಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಕ್ಯಾಲಿಕಟ್ ವಿಶ್ವವಿದ್ಯಾನಿಲಯ, ದ್ವಿತೀಯ ಸ್ಥಾನವನ್ನು ಮಂಡ್ಯ ವಿಶ್ವವಿದ್ಯಾನಿಲಯ ಹಾಗೂ ತೃತೀಯ ಸ್ಥಾನವನ್ನು ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಚತುರ್ಥ ಸ್ಥಾನವನ್ನು ಮೈಸೂರು ವಿಶ್ವವಿದ್ಯಾನಿಲಯ ಪಡೆದಿದೆ. ನಾಲ್ಕು ತಂಡಗಳು ಅಖಿಲ ಭಾರತ ವಿಶ್ವವಿದ್ಯಾನಿಲಯ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದಿವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article