
ಮೂಡುಬಿದಿರೆ: ನೆಲ್ಲಿಕಾರು ಮಹಿಳಾ ಗ್ರಾಮಸಭೆ-ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ಜೀವಾಂತವಾಗಿದೆ
Wednesday, January 29, 2025
ಮೂಡುಬಿದಿರೆ: ರಾಜ್ಯದ ಇತರ ಜಿಲ್ಲೆಗಳಿಂದ ನಮ್ಮ ಜಿಲ್ಲೆಯಲ್ಲಿರುವ ಕೋರೆ ಅಥವಾ ಕಂಪನಿಗಳಿಗೆ ಉದ್ಯೋಗಕ್ಕೆಂದು ಬಂದಿರುವವಲ್ಲಿ ಬಾಲ್ಯ ವಿವಾಹವಾದ ಒಂದೆರಡು ಪ್ರಕರಣಗಳು ಬೆಳಕಿವೆ ಬಂದಿವೆ ಆದ್ದರಿಂದ ಇಂತಹ ಘಟನೆಗಳು ಮರುಕಳಿಸದಂತೆ ಗಮನ ಹರಿಸಿಬೇಕಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿತಾ೯ಡಿ ವಲಯದ ಮೇಲ್ವೀಚಾರಕಿ ಕಾತ್ಯಾಯಿನಿ ಹೇಳಿದರು.
ಅವರು ಗ್ರಾ.ಪಂ. ಅಧ್ಯಕ್ಷ ಉದಯ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ನ ಹಳೆ ಕಟ್ಟಡದ ಸಭಾಂಗಣದಲ್ಲಿ ನಡೆದ ನೆಲ್ಲಿಕಾರು ಗಾಮ ಪಂಚಾಯತ್ ನ 2024-25 ನೇ ಸಾಲಿನ ಮಹಿಳಾ ಗ್ರಾಮಸಭೆ ಹಾಗೂ ಗ್ರಾಮ ಪಂಚಾಯತ್ ದೂರದೃಷ್ಟಿ ಯೋಜನೆ 2025-26 ರ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.
ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸರಕಾರವು ಉದ್ಯೋಗಿನಿ ಸಹಿತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.
ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಉಷಾ ಮಾತನಾಡಿ, ಗೃಹ ಆರೋಗ್ಯ ಯೋಜನೆಯು ಮುಂದಿನ ದಿನಗಳಲ್ಲಿ ಪ್ರಾರಂಭಿಸಲಾಗುವುದು. ಮಂಗಳವಾರ ಹಾಗೂ ಶುಕ್ರವಾರದಂದು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ 30 ವರ್ಷ ಮೇಲ್ಪಟ್ಟವರು ಇದರ ಪ್ರಯೋಜನವನ್ನು ಪಡೆದುಕೊಳ್ಳಿ ಎಂದ ಅವರು ಯಾವುದೇ ಪ್ರದೇಶದಲ್ಲಿ ನೀರು ನಿಂತು ರೋಗಾಣುಗಳು ಹರಡದಂತೆ ಜಾಗೃತೆ ವಹಿಸಿ ಎಂದು ಸಲಹೆ ನೀಡಿದರು.
ಉಪಾಧ್ಯಕ್ಷೆ ಸುಶೀಲಾ, ಸದಸ್ಯರಾದ ಆಶಾಲತಾ, ಜಯಂತ್ ಹೆಗ್ಡೆ, ಶಶಿಧರ್ ಎಂ. ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಿಡಿಓ ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಕಾಯ೯ಕ್ರಮ ನಿರೂಪಿಸಿದರು.