ಹೆಣ್ಣು-ಗಂಡು ಮಕ್ಕಳ ಸಂಖ್ಯೆಯಲ್ಲೂ ಸಮಾನತೆ ಇರಲಿ: ಮೇಲ್ವಿಚಾರಕಿ ಶುಭ

ಹೆಣ್ಣು-ಗಂಡು ಮಕ್ಕಳ ಸಂಖ್ಯೆಯಲ್ಲೂ ಸಮಾನತೆ ಇರಲಿ: ಮೇಲ್ವಿಚಾರಕಿ ಶುಭ


ಮೂಡುಬಿದಿರೆ: ಇಂದು ಹೆಣ್ಣು ಮಕ್ಕಳು ಗಂಡು ಮಕ್ಕಳಂತೆ ಎಲ್ಲಾ ಕ್ಷೇತ್ರದಲ್ಲಿಯೂ ಸಮಾನತೆಯನ್ನು ಕಾಣುತಿದ್ದಾರೆ. ಆದರೆ ಸಂಖ್ಯೆಯಲ್ಲಿ ಮಾತ್ರ ಗಂಡು ಮಕ್ಕಳಿಗಿಂತ ಕಡಿಮೆಯಿದೆ ಆದ್ದರಿಂದ ನಾವು ಸಂಖ್ಯೆಯ ವಿಚಾರದಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳುವ ಅಗತ್ಯತೆಯಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲ್ಲಮುಂಡ್ಕೂರು ವಲಯದ ಮೇಲ್ವಿಚಾರಕಿ ಶುಭ ಹೇಳಿದರು.

ಅವರು ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಇವುಗಳ ಜಂಟಿ ಆಶ್ರಯದಲ್ಲಿ ಶುಕ್ರವಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣಾ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹೆಣ್ಣು ಮಕ್ಕಳ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿದಿನ ಹೆಣ್ಣು ಮಕ್ಕಳ ದಿನವನ್ನು ಆಚರಿಸುವಂತಾಗಬೇಕು. ಹಿಂದಿನ ದಿನಗಳಲ್ಲಿ ಅತೀ ಹೆಚ್ಚು ಹೆಣ್ಣು ಭ್ರೂಣ ಹತ್ಯೆಯಾಗುತ್ತಿತ್ತು ಆದರೆ ಇದೀಗ ಭ್ರೂಣ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಎಲ್ಲೂ ಭ್ರೂಣಲಿಂಗ ಪತ್ತೆ ಮಾಡುವುದಿಲ್ಲ ಎಂದ ಅವರು ಹೆಣ್ಣು ಮಗುವಿಗೂ ಕೂಡ ಗಂಡು ಮಗುವಿನಷ್ಟೇ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಸಲಹೆ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಅಕ್ಷತಾ ನಾಯಕ್ ಮಾತನಾಡಿ, ಮಕ್ಕಳಲ್ಲಿ ಹೆಣ್ಣಾಗಲಿ, ಗಂಡಾಗಲಿ ಆರೋಗ್ಯವಂತ ಶಿಶುವಿರಲಿ. ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಹೇಗೆ ಬುದ್ದಿ ಹೇಳುತ್ತೇವೆಯೋ ಹಾಗೇ ಗಂಡು ಮಕ್ಕಳಿಗೂ ಮನೆಯ ಅಥವಾ ಅಕ್ಕ-ಪಕ್ಕದ ಮನೆಯ ಹೆಣ್ಣು ಮಕ್ಕಳನ್ನು ಗೌರವಯುತವಾಗಿ ಕಾಣುವಂತೆ ಬುದ್ಧಿ ಮಾತು ಹೇಳಬೇಕೆಂದರು.

ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾಂತಮ್ಮ ಹೆಣ್ಣು ಮಕ್ಕಳ ಮುಟ್ಟಿನ ಬಗ್ಗೆ, ಶುಚಿತ್ವದ ಕುರಿತು ಮಾಹಿತಿ ನೀಡಿದರು.

ಮೈನ್ ಶಾಲೆಯ ಸಹ ಶಿಕ್ಷಕಿ ಶಶಿಕಲಾ, ವಿದ್ಯಾರ್ಥಿಗಳು, ಹೆಣ್ಣು ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article